ಫುಟ್‌ಬಾಲ್
ನವದೆಹಲಿ: ಕನಿಷ್ಠ ಐವರು ಮಾಜಿ ರಾಷ್ಟ್ರೀಯ ಆಟಗಾರರಿಗೆ 14 ಮಂದಿಯ ಕಾರ್ಯಕಾರಿ ಮಂಡಳಿಯಲ್ಲಿ ಸ್ಥಾನ ನೀಡುವುದು, ಪದಾಧಿಕಾರಿಗಳನ್ನು ಅವಿಶ್ವಾಸ ನಿರ್ಣಯದ ಮೂಲಕ ಉಚ್ಚಾಟಿಸುವುದು ಸೇರಿದಂತೆ ಹಲವು ಕ್ರಾಂತಿಕಾರಿ ಬದಲಾವಣೆಗಳನ್ನು ಅಖಿಲ ಭಾರತ ಫುಟ್‌ಬಾಲ್ ಫೆಡರೇಷನ್‌ನ ಉದ್ದೇಶಿತ ಕರಡು ನಿಯಮಾವಳಿಗಳಲ್ಲಿ ಪ್ರಸ್ತಾವಿಸಲಾಗಿದೆ.
ಈ ಕರಡು ನಿಯಮಾವಳಗಳನ್ನು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್ ಸಿದ್ಧಪಡಿಸಿದ್ದಾರೆ. ಪಿ.ಎಸ್.ನರಸಿಂಹ ಮತ್ತು ಜೊಯ್ಮಾಲ್ಯ ಬಾಗ್ಚಿ ಅವರನ್ನು ಒಳಗೊಂಡ ಸುಪ್ರೀಂ ಕೋರ್ಟ್ ಪೀಠವು ಎಐಎಫ್‌ಎಫ್ ನಿಯಮಾವಳಿಗಳನ್ನು ಅಂತಿಮಗೊಳಿಸುವುದಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಮಾರ್ಚ್ 25ರಂದು ಆರಂಭಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.