ಕ್ರಿಸ್ಟಿಯಾನೊ ರೊನಾಲ್ಡೊ ಮತ್ತು ಜಾರ್ಜಿನಾ ರಾಡ್ರಿಗಸ್
ನವದೆಹಲಿ: ಪೋರ್ಚುಗಲ್ ಫುಟ್ಬಾಲ್ ತಂಡದ ಸೂಪರ್‌ಸ್ಟಾರ್ ಕ್ರಿಸ್ಟಿಯಾನೊ ರೊನಾಲ್ಡೊ ತಮ್ಮ ದೀರ್ಘಕಾಲದ ಗೆಳತಿ ಜಾರ್ಜಿನಾ ರಾಡ್ರಿಗಸ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಜಾರ್ಜಿನಾ ರಾಡ್ರಿಗಸ್ ತಮ್ಮ ನಿಶ್ಚಿತಾರ್ಥದ ಚಿತ್ರವನ್ನು ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪ್ರಕಟಿಸಿದ್ದು, ಕ್ರಿಸ್ಟಿಯಾನೊ ರೊನಾಲ್ಡೊ ಅವರನ್ನು ಟ್ಯಾಗ್ ಮಾಡಿದ್ದಾರೆ.
ಕ್ರಿಸ್ಟಿಯಾನೊ ರೊನಾಲ್ಡೊ–ಜಾರ್ಜಿನಾ ರಾಡ್ರಿಗಸ್ ಜೋಡಿ ಒಂದು ದಶಕದಿಂದ ಡೇಟಿಂಗ್ ಮಾಡುತ್ತಿದ್ದು, ನಾಲ್ಕು ಮಕ್ಕಳನ್ನು ಹೊಂದಿದ್ದಾರೆ.
ರೊನಾಲ್ಡೊ ಅವರು ಫುಟ್‌ಬಾಲ್ ಇತಿಹಾಸದಲ್ಲಿ 930 ಗೋಲು ದಾಖಲಿಸಿದ ಏಕೈಕ ಆಟಗಾರ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.