ADVERTISEMENT

ಫುಟ್‌ಬಾಲ್ ಕ್ಲಬ್‌ನಲ್ಲಿ ಬೆಂಕಿ: 10 ಮಂದಿ ಸಾವು

ಏಜೆನ್ಸೀಸ್
Published 9 ಫೆಬ್ರುವರಿ 2019, 18:27 IST
Last Updated 9 ಫೆಬ್ರುವರಿ 2019, 18:27 IST

ರಿಯೊ ಡಿ ಜನೈರೊ: ಬ್ರೆಜಿಲ್ ದೇಶದ ಫ್ಲೆಮಿಂಗೊ ಫುಟ್‌ಬಾಲ್ ಕ್ಲಬ್‌ನಲ್ಲಿ ಸಂಭವಿಸಿರುವ ಅಗ್ನಿ ಅವಘಡದಲ್ಲಿ ಹತ್ತು ಮಂದಿ ಸಾವನ್ನಪ್ಪಿದ್ದಾರೆ ಎಂದು ಬಿಬಿಸಿ ನ್ಯೂಸ್ ವರದಿ ಮಾಡಿದೆ.

ಬ್ರೆಜಿಲ್‌ನ ಅತಿ ದೊಡ್ಡ ಕ್ಲಬ್‌ ಇದಾಗಿದೆ. ಹೋದ ಎರಡು ತಿಂಗಳಿ ನಿಂದ ಯುವ ಆಟಗಾರರಿಗೆ ತರಬೇತಿ ಶಿಬಿರವನ್ನು ಇಲ್ಲಿ ನಡೆಸಲಾಗುತ್ತಿತ್ತು. ರಾತ್ರಿ ಹೊತ್ತು ಎಲ್ಲರೂ ಮಲಗಿದ್ದ ಸಂದರ್ಭದಲ್ಲಿ ಈ ದುರಂತ ಸಂಭ ವಿಸಿದೆ. ಯುವ ಆಟಗಾರರು ಮತ್ತು ಕ್ಲಬ್‌ನ ಸಿಬ್ಬಂದಿ ಮೃತಪಟ್ಟಿರುವ ಸಾಧ್ಯತೆ ಇದೆ. ತೀವ್ರವಾಗಿ ಗಾಯ ಗೊಂಡಿರುವ ಮೂವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT