ADVERTISEMENT

ಫುಟ್‌ಬಾಲ್ ದಿಗ್ಗಜ ಬಾಬು ಮಣಿ ನಿಧನ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2022, 19:04 IST
Last Updated 20 ನವೆಂಬರ್ 2022, 19:04 IST
ಬಾಬು ಮಣಿ
ಬಾಬು ಮಣಿ   

ಬೆಂಗಳೂರು: ಭಾರತ ಫುಟ್‌ಬಾಲ್ ತಂಡದ ಮಾಜಿ ನಾಯಕ ಬಾಬು ಮಣಿ (59) ಅವರು ಕೋಲ್ಕತ್ತದಲ್ಲಿ ಭಾನುವಾರ ನಿಧನರಾದರು. ಕಿಡ್ನಿ ಸಂಬಂಧಿತ ಸಮಸ್ಯೆಯಿಂದಅವರು ಬಳಲುತ್ತಿದ್ದರು.‌

ಬಾಬು ಮಣಿ ಅವರಿಗೆ ಪತ್ನಿ ಮತ್ತು ಪುತ್ರ ಇದ್ದಾರೆ.

ಬೆಂಗಳೂರಿನಲ್ಲಿ ಜನಿಸಿದ್ದ ಬಾಬು ಕೋಲ್ಕತ್ತದಲ್ಲಿ ನೆಲೆಸಿದ್ದರು. 1986–87ರ ಅವಧಿಯಲ್ಲಿ ರಾಷ್ಟ್ರೀಯ ತಂಡದ ನಾಯಕತ್ವ ವಹಿಸಿದ್ದರು. 1985 ಮತ್ತು 1987ರಲ್ಲಿ ದಕ್ಷಿಣ ಏಷ್ಯಾ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ಭಾರತ ತಂಡದ ಸದಸ್ಯರಾಗಿದ್ದರು.

ADVERTISEMENT

ಬೆಂಗಳೂರು ಇಂಡಿಪೆಂಡೆಂಟ್ಸ್ ಕ್ಲಬ್ ಪರ ವಿಂಗರ್ ಆಗಿ ವೃತ್ತಿಜೀವನ ಆರಂಭಿಸಿದ್ದ ಬಾಬು, 1981ರ ಸಂತೋಷ್‌ ಟ್ರೋಫಿ ಟೂರ್ನಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದರು. ಬಳಿಕ ಐಟಿಐ ಕ್ಲಬ್‌ ಮತ್ತು ಕೋಲ್ಕತ್ತದ ಮೊಹಮ್ಮಡನ್‌ ಸ್ಪೋರ್ಟಿಂಗ್‌ ತಂಡಗಳಿಗಾಗಿ
ಆಡಿದ್ದರು.

1985ರಲ್ಲಿ ಮೋಹನ್ ಬಾಗನ್ ತಂಡದಲ್ಲಿ ಆಡಿದ್ದ ಅವರು, ಅದೇ ವರ್ಷ ನೆಹರೂ ಕಪ್ ಟೂರ್ನಿಯಲ್ಲಿ ಕಣಕ್ಕಿಳಿದಿದ್ದರು. ವೃತ್ತಿಜೀವನಕ್ಕೆ ವಿದಾಯ ಹೇಳುವ ಮುನ್ನ ಈಸ್ಟ್ ಬೆಂಗಾಲ್ ತಂಡಕ್ಕಾಗಿ ಮೂರು ವರ್ಷ ಆಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.