
ಪ್ರಜಾವಾಣಿ ವಾರ್ತೆ
ಬೆಂಗಳೂರು: ಭಾರತ ಫುಟ್‌ಬಾಲ್ ತಂಡದ ಮಾಜಿ ಆಟಗಾರ ಸದಾತ್‌ಉಲ್ಲಾ ಖಾನ್ ಅವರು ಆರ್.ಟಿ.ನಗರದ ತಮ್ಮ ನಿವಾಸದಲ್ಲಿ ಮಂಗಳವಾರ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.
ಖಾನ್ ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.
‘ಟೀಮ್ ಮುಸ್ಲಿಂ ಹೀರೊಸ್ ಫುಟ್‌ಬಾಲ್ ಕ್ಲಬ್’ ಮೂಲಕ ವೃತ್ತಿ ಆರಂಭಿಸಿದ್ದ ಅವರು, ಸಂತೋಷ್ ಟ್ರೋಫಿ ಟೂರ್ನಿಯಲ್ಲಿ ಕರ್ನಾಟಕ ಹಾಗೂ ಪಶ್ಚಿಮ ಬಂಗಾಳ ತಂಡಗಳ ಪರ ಆಡಿದ್ದರು.
ಮಲೇಷ್ಯಾದ ಕ್ವಾಲಾಲಂಪುರದಲ್ಲಿ 1968ರಲ್ಲಿ ನಡೆದ ಮರ್ಡೆಕಾ ಟೂರ್ನಿಯಲ್ಲಿ ಖಾನ್ ಅವರು ಭಾರತ ತಂಡದ ಪರ ಆಡಿದ್ದರು. ರಷ್ಯಾ ತಂಡದ ವಿರುದ್ಧ ಬೆಂಗಳೂರಿನಲ್ಲಿ ನಡೆದ ಪ್ರದರ್ಶನ ಪಂದ್ಯದಲ್ಲಿಯೂ ಕಣಕ್ಕಿಳಿದಿದ್ದರು.
ಮುನಿರೆಡ್ಡಿಪಾಳ್ಯದ ಖೋಡೂಸ್ ಸ್ಮಶಾನದಲ್ಲಿ ಮಂಗಳವಾರ ಸಂಜೆ ಅಂತ್ಯಕ್ರಿಯೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.