ADVERTISEMENT

ಎಚ್‌ಎಫ್‌ಸಿಗೆ ಎಟಿಕೆಎಂಬಿ ಸವಾಲು

ಇಂಡಿಯನ್ ಸೂಪರ್ ಲೀಗ್ ಫುಟ್‌ಬಾಲ್ ಟೂರ್ನಿ

ಪಿಟಿಐ
Published 21 ಫೆಬ್ರುವರಿ 2021, 14:18 IST
Last Updated 21 ಫೆಬ್ರುವರಿ 2021, 14:18 IST
ಹೈದರಾಬಾದ್ ಎಫ್‌ಸಿ ತಂಡದ ಆಟಗಾರರು–ಐಎಸ್‌ಎಲ್ ಮೀಡಿಯಾ ಚಿತ್ರ
ಹೈದರಾಬಾದ್ ಎಫ್‌ಸಿ ತಂಡದ ಆಟಗಾರರು–ಐಎಸ್‌ಎಲ್ ಮೀಡಿಯಾ ಚಿತ್ರ   

ವಾಸ್ಕೊ: ಕಳೆದ 10 ಪಂದ್ಯಗಳಲ್ಲಿ ಅಜೇಯವಾಗುಳಿದಿರುವ ಹೈದರಾಬಾದ್ ಎಫ್‌ಸಿ (ಎಚ್‌ಎಫ್‌ಸಿ) ತಂಡವು ಪ್ಲೇ ಆಫ್‌ ಮೇಲೆ ಕಣ್ಣಿಟ್ಟಿದ್ದು, ಇಂಡಿಯನ್ ಸೂಪರ್ ಲೀಗ್ (ಐಎಸ್‌ಎಲ್) ಫುಟ್‌ಬಾಲ್ ಟೂರ್ನಿಯಲ್ಲಿ ಸೋಮವಾರ ನಡೆಯಲಿರುವ ಪಂದ್ಯದಲ್ಲಿ ಬಲಿಷ್ಠ ಎಟಿಕೆ ಮೋಹನ್ ಬಾಗನ್ (ಎಟಿಕೆಎಂಬಿ) ತಂಡವನ್ನು ಎದುರಿಸಲಿದೆ.

ಪಾಯಿಂಟ್ಸ್ ಪಟ್ಟಿಯಲ್ಲಿ ಸದ್ಯ ಮೂರನೇ ಸ್ಥಾನದಲ್ಲಿರುವ ಎಚ್‌ಎಫ್‌ಸಿ, ಟೂರ್ನಿಯಲ್ಲಿ ಮೊದಲ ಬಾರಿ ಪ್ಲೇ ಆಫ್‌ ಪ್ರವೇಶಿಸುವತ್ತ ಚಿತ್ತ ನೆಟ್ಟಿದೆ. ಈ ವರ್ಷದ ಆರಂಭದಿಂದ ಆ ತಂಡವು ಸೋಲು ಅನುಭವಿಸಿಲ್ಲ.

ಇದೇ ಲಯವನ್ನು ಮುಂದುವರಿಸಿ ಈ ಪಂದ್ಯದಲ್ಲಿ ಹೈದರಾಬಾದ್ ಸೋಲದೇ ಇದ್ದರೆ, ಅಗ್ರ ನಾಲ್ಕು ತಂಡಗಳಲ್ಲಿ ಸ್ಥಾನ ಗಳಿಸುವುದು ಸಾಧ್ಯವಾಗಲಿದೆ. ಅಲ್ಲದೆ ಐಎಸ್ಎಲ್ ಇತಿಹಾಸದಲ್ಲಿಯೇ ಅತಿ ಹೆಚ್ಚು ಪಂದ್ಯಗಳಲ್ಲಿ ಅಜೇಯವಾಗುಳಿದ ಎರಡನೇ ತಂಡ ಎನಿಸಿಕೊಳ್ಳಲಿದೆ.

ADVERTISEMENT

ಪ್ಲೇ ಆಫ್‌ನಲ್ಲಿ ಈಗಾಗಲೇ ಸ್ಥಾನ ಖಚಿತಪಡಿಸಿಕೊಂಡಿರುವ ಎಟಿಕೆ ಮೋಹನ್ ಬಾಗನ್ ತಂಡಕ್ಕೂ ಜಯ ಬೇಕಾಗಿದೆ. ಈ ಗೆಲುವಿನಿಂದ ಲೀಗ್ ವಿಜೇತರು ಎಂಬ ಶ್ರೇಯವನ್ನು ಅದು ಹೊಂದಲಿದೆ. ಅಲ್ಲದೆ ಎಎಫ್‌ಸಿ ಚಾಂಪಿಯನ್ಸ್ ಲೀಗ್‌ನಲ್ಲಿ ಸ್ಥಾನ ಪಡೆಯಲಿದೆ.

ಪಂದ್ಯ ಆರಂಭ: ಸಂಜೆ 7.30

ಸ್ಥಳ; ತಿಲಕ್ ಮೈದಾನ, ವಾಸ್ಕೊ

ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.