ADVERTISEMENT

ಸ್ಯಾಫ್‌ ಫುಟ್‌ಬಾಲ್‌: ಫೈನಲ್‌ಗೆ ಭಾರತ ಯುವ ತಂಡ

ಪಿಟಿಐ
Published 12 ಸೆಪ್ಟೆಂಬರ್ 2022, 14:15 IST
Last Updated 12 ಸೆಪ್ಟೆಂಬರ್ 2022, 14:15 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಕೊಲಂಬೊ: ಥಂಗ್ಲಾಲ್‌ಸನ್‌ ಗಂಗ್ಟೆ ಅವರ ಮಿಂಚಿನ ಆಟದ ಬಲದಿಂದ ಭಾರತ ತಂಡವು 17 ವರ್ಷದೊಳಗಿನವರ ಸ್ಯಾಫ್‌ ಫುಟ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಫೈನಲ್‌ ತಲುಪಿದೆ.

ಇಲ್ಲಿ ನಡೆಯುತ್ತಿರುವ ಟೂರ್ನಿಯ ಸೆಮಿಫೈನಲ್ ಹಣಾಹಣಿಯಲ್ಲಿ ಭಾರತ 2–1ರಿಂದ ಬಾಂಗ್ಲಾದೇಶವನ್ನು ಸೋಲಿಸಿತು.ಥಂಗ್ಲಾಲ್‌ಸನ್‌ (51 ಮತ್ತು 59ನೇ ನಿಮಿಷ) ಪಂದ್ಯದ ದ್ವಿತೀಯಾರ್ಧದಲ್ಲಿ ಎರಡು ಗೋಲು ಗಳಿಸಿ ತಂಡವನ್ನು ಜಯದತ್ತ ಮುನ್ನಡೆಸಿದರು.

62ನೇ ನಿಮಿಷದಲ್ಲಿ ಮಿರಾಜುಲ್‌ ಇಸ್ಲಾಂ ಪೆನಾಲ್ಟಿ ಕಾರ್ನರ್ ಅವಕಾಶದಲ್ಲಿ ಗೋಲು ಗಳಿಸಿ ಬಾಂಗ್ಲಾದೇಶ ತಂಡದ ಹಿನ್ನಡೆಯನ್ನು ತಗ್ಗಿಸಿದರು. ಮೊದಲಾರ್ಧದ ಅವಧಿಯಲ್ಲಿ ಉಭಯ ತಂಡಗಳು ಹಲವು ಅವಕಾಶಗಳನ್ನು ಸೃಷ್ಟಿಸಿಕೊಂಡರೂ ಚೆಂಡನ್ನು ಗೋಲುಪೆಟ್ಟಿಗೆಗೆ ಸೇರಿಸಲು ಸಾಧ್ಯವಾಗಲಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.