ADVERTISEMENT

ಐಎಸ್‌ಎಲ್‌: ಬಿಎಫ್‌ಸಿಗೆ ಲಯಕ್ಕೆ ಮರಳುವ ತವಕ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2021, 19:31 IST
Last Updated 27 ನವೆಂಬರ್ 2021, 19:31 IST
ಬಿಎಫ್‌ಸಿ ತಂಡದ ಆಟಗಾರರು– ಎಎಫ್‌ಪಿ ಚಿತ್ರ
ಬಿಎಫ್‌ಸಿ ತಂಡದ ಆಟಗಾರರು– ಎಎಫ್‌ಪಿ ಚಿತ್ರ   

ಬ್ಯಾಂಬೊಲಿಮ್‌: ಬೆಂಗಳೂರು ಎಫ್‌ಸಿ (ಬಿಎಫ್‌ಸಿ) ತಂಡವು ಇಂಡಿಯನ್ ಸೂಪರ್ ಲೀಗ್ (ಐಎಸ್‌ಎಲ್‌) ಫುಟ್‌ಬಾಲ್ ಟೂರ್ನಿಯಲ್ಲಿ ಭಾನುವಾರ ಕೇರಳ ಬ್ಲಾಸ್ಟರ್ಸ್‌ ತಂಡಕ್ಕೆ ಮುಖಾಮುಖಿಯಾಗಲಿದೆ.

ಇಲ್ಲಿಯ ಅಥ್ಲೆಟಿಕ್‌ ಕ್ರೀಡಾಂಗಣದಲ್ಲಿ ಪಂದ್ಯ ನಿಗದಿಯಾಗಿದೆ. ಟೂರ್ನಿಯ ಮೊದಲ ಪಂದ್ಯದಲ್ಲಿ ನಾರ್ತ್‌ ಈಸ್ಟ್ ಯುನೈಟೆಡ್ ಎಫ್‌ಸಿ ಎದುರು 4–2ರಿಂದ ಗೆದ್ದಿದ್ದ ಸುನಿಲ್ ಚೆಟ್ರಿ ನಾಯಕತ್ವದ ಬಿಎಫ್‌ಸಿ, ಎರಡನೇ ಪಂದ್ಯದಲ್ಲಿ ಒಡಿಶಾ ಎಫ್‌ಸಿ ಎದುರು 1–3ರಿಂದ ಎಡವಿತ್ತು.

ಈ ಪಂದ್ಯದಲ್ಲಿ ಲಯ ಕಂಡುಕೊಳ್ಳುವವಿಶ್ವಾಸದಲ್ಲಿದೆ.

ADVERTISEMENT

ಇದುವರೆಗೆ ಎಲ್ಲ ಹಂತಗಳಲ್ಲಿ ಉತ್ತಮ ಸಾಮರ್ಥ್ಯ ತೋರಿದ್ದರೂ ಗೋಲು ಗಳಿಕೆಯಲ್ಲಿ ಬಿಎಫ್‌ಸಿ ತಂಡಕ್ಕೆ ನಿರೀಕ್ಷಿತ ಫಲ ಸಿಕ್ಕಿಲ್ಲ.

ಕೇರಳ ತಂಡ ಆಡಿದ ಎರಡು ಪಂದ್ಯಗಳ ಪೈಕಿ ಒಂದರಲ್ಲಿ ಡ್ರಾ ಸಾಧಿಸಿದ್ದರೆ, ಮತ್ತೊಂದರಲ್ಲಿ ಸೋಲು ಕಂಡಿದೆ. ಈ ಪಂದ್ಯದಲ್ಲಿ ಗೆಲುವಿಗಾಗಿ ಛಲ ತೊಟ್ಟಿದೆ.

ಪಂದ್ಯ ಆರಂಭ: ರಾತ್ರಿ 7.30

ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್ ನೆಟ್‌ವರ್ಕ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.