ಫುಟ್‌ಬಾಲ್
ಹೈದರಾಬಾದ್: ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಬೆಂಗಳೂರು ಎಫ್‌ಸಿ ತಂಡವು ಇಂಡಿಯನ್ ಸೂಪರ್ ಲೀಗ್‌ನ ಪಂದ್ಯದಲ್ಲಿ ಶನಿವಾರ ಆತಿಥೇಯ ಹೈದರಾಬಾದ್ ಎಫ್‌ಸಿ ತಂಡವನ್ನು ಎದುರಿಸಲಿದೆ.
ತವರಿನಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಮೊಹಮ್ಮಡನ್ ಎಸ್‌ಸಿ ವಿರುದ್ಧ 1–0ಯಿಂದ ಆಘಾತಕಾರಿ ಸೋಲು ಕಂಡಿದ್ದ ಸುನಿಲ್ ಚೆಟ್ರಿ ಬಳಗವು ಗೆಲುವಿನ ಹಳಿಗೆ ಮರಳುವ ಪ್ರಯತ್ನದಲ್ಲಿದೆ. 15 ಪಂದ್ಯಗಳಲ್ಲಿ ಎಂಟನ್ನು ಗೆದ್ದು 27 ಅಂಕ ಪಡೆದಿದೆ.
ಆಡಿರುವ 15 ಪಂದ್ಯಗಳಲ್ಲಿ ಕೇವಲ ಎರಡನ್ನು ಗೆದ್ದು 9 ಅಂಕ ಗಳಿಸಿರುವ ಹೈದರಾಬಾದ್ ತಂಡವು ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.