ADVERTISEMENT

ಇಂಡಿಯನ್‌ ಸೂಪರ್‌ ಲೀಗ್‌: ಜಮ್ಶೆಡ್‌ಪುರಕ್ಕೆ ಮಣಿದ ಮೊಹಮ್ಮಡನ್‌

ಪಿಟಿಐ
Published 15 ಫೆಬ್ರುವರಿ 2026, 16:12 IST
Last Updated 15 ಫೆಬ್ರುವರಿ 2026, 16:12 IST
<div class="paragraphs"><p>ಫುಟ್‌ಬಾಲ್‌</p></div>

ಫುಟ್‌ಬಾಲ್‌

   

ಜಮ್ಶೆಡ್‌ಪುರ: ಫ್ರಾನ್ಸ್‌ನ ಆಟಗಾರ ಮದೀಹ್ ತಲಾಲ್ (9ನೇ ನಿ.) ಅವರು ಹೊಡೆದ ಗೋಲಿನ ನೆರವಿನಿಂದ ಜಮ್ಶೆಡ್‌ಪುರ ಫುಟ್‌ಬಾಲ್ ಕ್ಲಬ್‌ ತಂಡವು ಭಾನುವಾರ 1–0ಯಿಂದ ಮೊಹಮ್ಮಡನ್‌ ಸ್ಪೋರ್ಟ್ಸ್‌ ಕ್ಲಬ್‌ ತಂಡವನ್ನು ಮಣಿಸಿತು. ಅದರೊಂದಿಗೆ ಇಂಡಿಯನ್‌ ಸೂಪರ್‌ ಲೀಗ್‌ ಫುಟ್‌ಬಾಲ್‌ ಟೂರ್ನಿಯಲ್ಲಿ ಶುಭಾರಂಭ ಮಾಡಿತು.

ಜೆಆರ್‌ಡಿ ಟಾಟಾ ಸ್ಪೋರ್ಟ್ಸ್‌ ಕಾಂಪ್ಲೆಕ್ಸ್‌ನಲ್ಲಿ ನಡೆದ ಪಂದ್ಯದಲ್ಲಿ ಮದೀಹ್‌ ಆರಂಭದಲ್ಲಿಯೇ ಗೋಲು ಗಳಿಸಿ ಮುನ್ನಡೆ ತಂದುಕೊಟ್ಟರು. ನಂತರ ರಕ್ಷಣಾತ್ಮಕ ಆಟದ ಮೊರೆ ಹೋದ ಆತಿಥೇಯ ತಂಡವು, ಎದುರಾಳಿ ತಂಡಕ್ಕೆ ಗೋಲು ಬಿಟ್ಟುಕೊಡದೆ ಪಂದ್ಯವನ್ನು ಗೆದ್ದುಕೊಂಡಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.