ADVERTISEMENT

ಇಂಡಿಯನ್‌ ಸೂಪರ್‌ ಲೀಗ್‌: ಗೋವಾಗೆ ಮಣಿದ ಚೆನ್ನೈಯಿನ್‌

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2018, 16:26 IST
Last Updated 6 ಅಕ್ಟೋಬರ್ 2018, 16:26 IST

ಚೆನ್ನೈ: ಅಮೋಘ ಆಟ ಆಡಿದ ಎಫ್‌ಸಿ ಗೋವಾ ತಂಡದವರು ಇಂಡಿಯನ್‌ ಸೂಪರ್‌ ಲೀಗ್‌ (ಐಎಸ್‌ಎಲ್‌) ಐದನೇ ಆವೃತ್ತಿಯ ಪಂದ್ಯದಲ್ಲಿ ಗೆದ್ದಿದ್ದಾರೆ.

ಜವಾಹರಲಾಲ್‌ ನೆಹರೂ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಹೋರಾಟದಲ್ಲಿ ಗೋವಾ 3–1 ಗೋಲುಗಳಿಂದ ಹಾಲಿ ಚಾಂಪಿಯನ್‌ ಚೆನ್ನೈಯಿನ್‌ ಎಫ್‌ಸಿ ತಂಡವನ್ನು ಮಣಿಸಿತು.

ಗೋವಾ ತಂಡದ ಎಡು ಬೇಡಿಯಾ (12ನೇ ನಿಮಿಷ), ಫೆರಾನ್‌ ಕೊರೊಮಿನಾಸ್‌ (53ನೇ ನಿ.) ಮತ್ತು ಮೌರ್‌ತಾದ ಫಾಲ್‌ (80ನೇ ನಿ.) ತಲಾ ಒಂದು ಗೋಲು ಗಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.