ADVERTISEMENT

ರಾಷ್ಟ್ರೀಯ ಫುಟ್‌ಬಾಲ್ ಚಾಂಪಿಯನ್‌ಷಿಪ್‌: ಕರ್ನಾಟಕ ಶುಭಾರಂಭ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2025, 17:10 IST
Last Updated 19 ನವೆಂಬರ್ 2025, 17:10 IST
<div class="paragraphs"><p>ಫುಟ್‌ಬಾಲ್</p></div>

ಫುಟ್‌ಬಾಲ್

   

ಬೆಂಗಳೂರು: ಕರ್ನಾಟಕ ತಂಡವು ಆಂಧ್ರಪ್ರದೇಶದ ಅನಂತಪುರದಲ್ಲಿ ಬುಧವಾರ ಆರಂಭಗೊಂಡ ಡಾ.ತಾಲಿಮೆರೆನ್‌ ಆವೊ ಜೂನಿಯರ್‌ ಬಾಲಕಿಯರ ರಾಷ್ಟ್ರೀಯ ಫುಟ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ 4–0ಯಿಂದ ಛತ್ತೀಸಗಢ ತಂಡವನ್ನು ಮಣಿಸಿ ಶುಭಾರಂಭ ಮಾಡಿತು.

ಸಂಘಟಿತ ಆಟ ಆಡಿದ ಯಶಿಕಾ ಹರಿಬಾಬು ನಾಯಕತ್ವದ ರಾಜ್ಯ ತಂಡವು ಆರಂಭದಿಂದಲೇ ಪ್ರಾಬಲ್ಯ ಸಾಧಿಸಿತು. ಯಶಿಕಾ 13ನೇ ನಿಮಿಷದಲ್ಲಿ ಗೋಲು ಹೊಡೆದು ಆರಂಭಿಕ ಮುನ್ನಡೆ ತಂದುಕೊಟ್ಟರು. ಕ್ಯಾಥರಿನ್‌ ಥಂಗಾ 18ನೇ ನಿಮಿಷದಲ್ಲಿ ಗೋಲು ಗಳಿಸಿ, ಮುನ್ನಡೆಯನ್ನು ಹಿಗ್ಗಿಸಿದರು.

ADVERTISEMENT

ನಂತರ, ದಿವ್ಯಾ ಶ್ರೀರಾಮ್‌ (32ನೇ ನಿ. ಹಾಗೂ 38ನೇ ನಿ.) ಅವಳಿ ಗೋಲು ಹೊಡೆದು ಗೆಲುವಿನ ಅಂತರವನ್ನು ಹೆಚ್ಚಿಸಿದರು.

ಕರ್ನಾಟಕ ತಂಡವು ಶುಕ್ರವಾರ ನಡೆಯಲಿರುವ ಲೀಗ್‌ನ ಎರಡನೇ ಪಂದ್ಯದಲ್ಲಿ ಗುಜರಾತ್ ತಂಡವನ್ನು ಎದುರಿಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.