ಫುಟ್‌ಬಾಲ್
ಬೆಂಗಳೂರು: ಸಾಂಘಿಕ ಆಟ ಪ್ರದರ್ಶಿಸಿದ ಕಿಕ್‌ಸ್ಟಾರ್ಟ್ ತಂಡವು ಕೆಎಸ್‌ಎಫ್‌ಎ ಸೂಪರ್ ಡಿವಿಷನ್ ಲೀಗ್ ಫುಟ್‌ಬಾಲ್ ಚಾಂಪಿಯನ್‌ಷಿಪ್‌ನ ಪಂದ್ಯದಲ್ಲಿ ಮಂಗಳವಾರ 3–1 ಗೋಲುಗಳಿಂದ ಎಂಎಫ್‌ಎಆರ್ ಸ್ಟೂಡೆಂಟ್ಸ್ ಯೂನಿಯನ್ ಎಫ್‌ಸಿ ತಂಡವನ್ನು ಮಣಿಸಿತು.
ಬೆಂಗಳೂರು ಫುಟ್‌ಬಾಲ್ ಕ್ರೀಡಾಂಗಣದಲ್ಲಿ ನಡೆದ ಮತ್ತೊಂದು ಪಂದ್ಯದಲ್ಲಿ ಸ್ಪೋರ್ಟಿಂಗ್ ಕ್ಲಬ್ ಬೆಂಗಳೂರು ತಂಡವು 2–0ರಿಂದ ಬೆಂಗಳೂರು ಸಿಟಿ ಎಫ್‌ಸಿ ತಂಡವನ್ನು ಸೋಲಿಸಿತು. ಇನ್ನೊಂದು ಪಂದ್ಯದಲ್ಲಿ ಕೊಡಗು ಎಫ್‌ಸಿ ತಂಡವು 3–0ಯಿಂದ ರಿಯಲ್ ಬೆಂಗಳೂರು ಎಫ್‌ಸಿ ತಂಡವನ್ನು ಪರಾಭವಗೊಳಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.