ಲಯೊನೆಲ್ ಮೆಸ್ಸಿ
- ಪಿಟಿಐ ಚಿತ್ರ
ಕೋಲ್ಕತ್ತ: ‘ಗೋಟ್’ ಪ್ರವಾಸಕ್ಕೆ ಭಾರತಕ್ಕೆ ಆಗಮಿಸಿದ ಫುಟ್‌ಬಾಲ್ ತಾರೆ ಲಯೊನೆಲ್ ಮೆಸ್ಸಿಗೆ ₹ 89 ಕೋಟಿ ಪಾವತಿಸಲಾಗಿದೆ. ₹ 11 ಕೋಟಿ ತೆರಿಗೆ ಭಾರತ ಸರ್ಕಾರಕ್ಕೆ ಪಾವತಿಸಲಾಗಿದೆ, ಒಟ್ಟು ₹ 100 ಕೋಟಿ ವೆಚ್ಚವಾಗಿದೆ ಎಂದು ಕಾರ್ಯಕ್ರಮ ಆಯೋಜಿಸಿದ್ದ ಸತಾದ್ರು ದತ್ತಾ ಎಸ್ಐಟಿ ವಿಚಾರಣೆ ವೇಳೆ ಹೇಳಿದ್ದಾರೆ.
ಕೋಲ್ಕತ್ತದಲ್ಲಿ ಮೆಸ್ಸಿ ಕಾರ್ಯಕ್ರಮ ಬಳಿಕ ನಡೆದ ದಾಂದಲೆ ಸಂಬಂಧ ದತ್ತಾ ಅವರನ್ನು ಬಂಧಿಸಿ ಎಸ್ಐಟಿ ವಿಚಾರಣೆ ನಡೆಸುತ್ತಿದೆ.
ವೆಚ್ಚದ ಶೇ 30ರಷ್ಟು ಪ್ರಯೋಜಕರಿಂದ ಶೇ 30ರಷ್ಟು ಟಿಕೆಟ್ ಮಾರಾಟದಿಂದ ಸಂಗ್ರಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ದತ್ತಾ ಖಾತೆಯಲ್ಲಿರುವ ₹ 20 ಕೋಟಿಗೂ ಅಧಿಕ ಹಣವನ್ನು ಎಸ್ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ. ಶುಕ್ರವಾರ, ದತ್ತಾ ಅವರ ಮನೆ ಮೇಲೆ ದಾಳಿ ನಡೆಸಿದ ಎಸ್‌ಐಟಿಯ ತನಿಖಾಧಿಕಾರಿಗಳು ಹಲವಾರು ದಾಖಲೆಗಳನ್ನು ವಶಪಡಿಸಿಕೊಂಡರು ಎಂದು ಅವರು ಮಾಹಿತಿ ನೀಡಿದ್ದಾರೆ.
‘ಬ್ಯಾಂಕ್ ಖಾತೆಯಲ್ಲಿರುವ ಹಣವು ಕೋಲ್ಕತ್ತ ಮತ್ತು ಹೈದರಾಬಾದ್‌ನಲ್ಲಿ ನಡೆದ ಮೆಸ್ಸಿ ಕಾರ್ಯಕ್ರಮದ ಟಿಕೆಟ್‌ಗಳನ್ನು ಮಾರಾಟದಿಂದ ಮತ್ತು ಪ್ರಾಯೋಜಕರಿಂದ ಪಡೆದ ಹಣ ಎಂದು ದತ್ತಾ ಹೇಳಿಕೊಂಡಿದ್ದಾನೆ. ನಾವು ಅವನ ಹೇಳಿಕೆಗಳನ್ನು ಪರಿಶೀಲಿಸುತ್ತಿದ್ದೇವೆ’ ಎಂದು ಅಧಿಕಾರಿ ಹೇಳಿದ್ದಾರೆ.
ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮ ವೀಕ್ಷಿಸಲು ಸಾವಿರಾರು ಪ್ರೇಕ್ಷಕರು ದುಬಾರಿ ಟಿಕೆಟ್‌ಗಳನ್ನು ಖರೀದಿಸಿದ್ದರು. ಆದರೆ ಮೈದಾನದಲ್ಲಿ ಮೆಸ್ಸಿಯ ಸುತ್ತಲೂ ಹೆಚ್ಚಿನ ಸಂಖ್ಯೆಯ ಜನರು ನೆರೆದಿದ್ದರಿಂದ ಕಾರ್ಯಕ್ರಮವು ಅವ್ಯವಸ್ಥೆಗೆ ಕಾರಣವಾಯಿತು. ಗ್ಯಾಲರಿಗಳಲ್ಲಿ ಕುಳಿತಿದ್ದ ಅಭಿಮಾನಿಗಳಿಗೆ ಮೆಸ್ಸಿಯನ್ನು ನೋಡಲು ಸಾಧ್ಯವಾಗಲಿಲ್ಲ. ಇದರಿಂದ ಕೋಪಗೊಂಡ ಅಭಿಮಾನಿಗಳು ದಾಂದಲೆ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.