ಮಲಪ್ಪುರಂ: ಕೇರಳದಲ್ಲಿ ಫುಟ್‌ಬಾಲ್ ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಣೆಗಾಗಿ ತಾತ್ಕಾಲಿಕವಾಗಿ ನಿರ್ಮಿಸಿದ್ದ ಗ್ಯಾಲರಿ ಕುಸಿದು 225 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಮಲಪ್ಪುರಂ ಜಿಲ್ಲೆಯ ವಂಡೂರ್ ಸಮೀಪದ ಪೂಂಗೋಡಿನ ಶಾಲಾ ಮೈದಾನದಲ್ಲಿ ಶನಿವಾರ ರಾತ್ರಿ ಸೆವೆನ್ಸ್ ಫುಟ್‌ಬಾಲ್ ಪಂದ್ಯ ಆರಂಭಕ್ಕೂ ಮುನ್ನ ಘಟನೆ ನಡೆದಿದೆ.
ಇದನ್ನೂ ಓದಿ:ಐಎಸ್ಎಲ್ಗೆ ಹೊಸ ಅಧಿಪತಿ ಯಾರು?
ಈಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸ್ಥಳೀಯ ಫುಟ್‌ಬಾಲ್ ಕ್ಲಬ್ ನೇತೃತ್ವದಲ್ಲಿ ಸಹಾಯಾರ್ಥ ಪಂದ್ಯ ಆಯೋಜಿಸಲಾಗಿತ್ತು. ಸುಮಾರು 3,500 ಮಂದಿ ಪಂದ್ಯ ವೀಕ್ಷಣೆಗೆ ಆಗಮಿಸಿದ್ದರು.
ಘಟನೆ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ ಪ್ರಾರಂಭಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.