ಕಲ್ಯಾಣಿ, ಪಶ್ಚಿಮ ಬಂಗಾಳ: ಮೋಹನ್ ಬಾಗನ್ ತಂಡ ಎರಡನೇ ಬಾರಿ ಐ–ಲೀಗ್ ಫುಟ್‌ಬಾಲ್ ಟೂರ್ನಿಯ ಕಿರೀಟ ಧರಿಸಿತು. ಮಂಗಳವಾರ ನಡೆದ ಪಂದ್ಯದಲ್ಲಿ 1–0ಯಿಂದ ಐಜ್ವಾಲ್ ಎಫ್‌ಸಿ ತಂಡವನ್ನು ಮಣಿಸಿತು. ಈ ಋತುವಿನಲ್ಲಿ ಇನ್ನೂ ನಾಲ್ಕು ಸುತ್ತುಗಳು ಬಾಕಿ ಇರುವಂತೆಯೇ ಟ್ರೋಫಿ ತನ್ನದಾಗಿಸಿಕೊಂಡಿತು.
ಬಾಗನ್ ಸದ್ಯ 16 ಪಂದ್ಯಗಳಿಂದ 39 ಪಾಯಿಂಟ್ಸ್ ಕಲೆಹಾಕಿದೆ. ಎರಡನೇ ಸ್ಥಾನದಲ್ಲಿರುವ ಈಸ್ಟ್ ಬೆಂಗಾಲ್ ಬಳಿ 23 ಪಾಯಿಂಟ್ಸ್ ಇವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.