ADVERTISEMENT

ಫುಟ್‌ಬಾಲ್‌: ನೇಮರ್‌ ಕಾಲ್ಚಳಕ

ಏಜೆನ್ಸೀಸ್
Published 23 ಸೆಪ್ಟೆಂಬರ್ 2019, 14:12 IST
Last Updated 23 ಸೆಪ್ಟೆಂಬರ್ 2019, 14:12 IST
ಪ್ಯಾರಿಸ್‌ ಸೇಂಟ್‌ ಜರ್ಮೈನ್‌ ತಂಡದ ನೇಮರ್‌ (ಮಧ್ಯ) ಚೆಂಡನ್ನು ಗುರಿ ಮುಟ್ಟಿಸಲು ಪ್ರಯತ್ನಿಸಿದರು –ರಾಯಿಟರ್ಸ್‌ ಚಿತ್ರ
ಪ್ಯಾರಿಸ್‌ ಸೇಂಟ್‌ ಜರ್ಮೈನ್‌ ತಂಡದ ನೇಮರ್‌ (ಮಧ್ಯ) ಚೆಂಡನ್ನು ಗುರಿ ಮುಟ್ಟಿಸಲು ಪ್ರಯತ್ನಿಸಿದರು –ರಾಯಿಟರ್ಸ್‌ ಚಿತ್ರ   

ಪ್ಯಾರಿಸ್‌: ನಿಗದಿತ ಅವಧಿಯ ಆಟ ಮುಗಿಯಲು ಮೂರು ನಿಮಿಷ ಇದ್ದಾಗ ಕಾಲ್ಚಳಕ ತೋರಿದ ನೇಮರ್‌, ಗ್ರೂಪಾಮ ಕ್ರೀಡಾಂಗಣದಲ್ಲಿ ಸೇರಿದ್ದ ಅಭಿಮಾನಿಗಳನ್ನು ರಂಜಿಸಿದರು.

ನೇಮರ್‌ ಗಳಿಸಿದ ಏಕೈಕ ಗೋಲಿನ ಬಲದಿಂದ ಪ್ಯಾರಿಸ್‌ ಸೇಂಟ್‌ ಜರ್ಮೈನ್‌ ತಂಡವು ಲೀಗ್‌–1 ಫುಟ್‌ಬಾಲ್‌ ಟೂರ್ನಿಯ ಪಂದ್ಯದಲ್ಲಿ 1–0 ರಿಂದ ಒಲಿಂಪಿಕ್‌ ಲಯನೆಸ್‌ ತಂಡವನ್ನು ಮಣಿಸಿತು. ಇದರೊಂದಿಗೆ ಒಟ್ಟು ಪಾಯಿಂಟ್ಸ್‌ ಅನ್ನು 15ಕ್ಕೆ ಹೆಚ್ಚಿಸಿಕೊಂಡು ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಇನ್ನಷ್ಟು ಭದ್ರಪಡಿಸಿಕೊಂಡಿತು.

ಅರಂಭದಿಂದಲೂ ಉಭಯ ತಂಡಗಳು ಜಿದ್ದಾಜಿದ್ದಿನಿಂದ ಸೆಣಸಿದವು. ಹೀಗಾಗಿ ಮೊದಲಾರ್ಧ ಗೋಲುರಹಿತವಾಗಿತ್ತು. ದ್ವಿತೀಯಾರ್ಧದ ಶುರುವಿನಲ್ಲೂ ತುರುಸಿನ ಪೈಪೋಟಿ ಏರ್ಪಟ್ಟಿತು. 87ನೇ ನಿಮಿಷದಲ್ಲಿ ಗೋಲು ಹೊಡೆದ ನೇಮರ್‌ ಸಂಭ್ರಮಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.