ADVERTISEMENT

ರೋಹೆನ್‌ ಹ್ಯಾಟ್ರಿಕ್‌: ಬಿಎಫ್‌ಸಿಗೆ ಸುಲಭ ಜಯ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2025, 18:59 IST
Last Updated 14 ನವೆಂಬರ್ 2025, 18:59 IST
ಬಿಎಫ್‌ಸಿ
ಬಿಎಫ್‌ಸಿ   

ಬೆಂಗಳೂರು: ಸಿ. ರೋಹೆನ್‌ ಸಿಂಗ್‌ (34ನೇ ನಿ.,75ನೇ ನಿ. ಹಾಗೂ 82ನೇ ನಿ.) ಅವರ ಹ್ಯಾಟ್ರಿಕ್‌ ಗೋಲುಗಳ ನೆರವಿನಿಂದ ಬೆಂಗಳೂರು ಫುಟ್‌ಬಾಲ್‌ ಕ್ಲಬ್‌ (ಬಿಎಫ್‌ಸಿ)  ತಂಡವು ಕೆಎಸ್‌ಎಫ್‌ಎ ಸೂಪರ್‌ ಡಿವಿಷನ್‌ ಲೀಗ್‌ ಚಾಂಪಿಯನ್‌ಷಿಪ್‌ ಪಂದ್ಯದಲ್ಲಿ ಶುಕ್ರವಾರ 8–1ರಿಂದ ಎಂಎಫ್‌ಎಆರ್‌ ಯೂನಿಯನ್‌ ಎಫ್‌ಸಿ ವಿರುದ್ಧ ಸುಲಭ ಜಯ ದಾಖಲಿಸಿತು.

ಬೆಂಗಳೂರು ಫುಟ್‌ಬಾಲ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರಂಭದಿಂದಲೂ ಪ್ರಾಬಲ್ಯ ಸಾಧಿಸಿದ ಬಿಎಫ್‌ಸಿ ತಂಡವು ನಿರಾಯಾಸವಾಗಿ ಪಂದ್ಯವನ್ನು ತನ್ನದಾಗಿಸಿಕೊಂಡಿತು.

ದಿನದ ಇನ್ನೊಂದು ಪಂದ್ಯದಲ್ಲಿ ಸ್ಪೋರ್ಟಿಂಗ್‌ ಕ್ಲಬ್‌ ಬೆಂಗಳೂರು ತಂಡವು 2–1ರಿಂದ ಬೆಂಗಳೂರು ಡ್ರೀಮ್‌ ಯುನೈಟೆಡ್‌ ಎಫ್‌ಸಿ ತಂಡದ ವಿರುದ್ಧ ರೋಚಕ ಗೆಲುವು ಸಾಧಿಸಿತು.

ADVERTISEMENT

ಮತ್ತೊಂದು ಪಂದ್ಯದಲ್ಲಿ ಸಂಘಟಿತ ಆಟವಾಡಿದ ಎಂಇಜಿ ಆ್ಯಂಡ್‌ ಸೆಂಟರ್‌ ಎಫ್‌ಸಿ ತಂಡವು 4–0ಯಿಂದ ಭಾರತ್‌ ಬೆಂಗಳೂರು ಎಫ್‌ಸಿ ತಂಡವನ್ನು ನಿರಾಯಾಸವಾಗಿ ಮಣಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.