ಸಂತೋಷ್ ಟ್ರೋಫಿ
credit: Wikipedia
ನವದೆಹಲಿ: 2024ರ ಫೆಬ್ರುವರಿ 21ರಿಂದ ಮಾರ್ಚ್ 9ರವರೆಗೆ ಅರುಣಾಚಲ ಪ್ರದೇಶದಲ್ಲಿ ನಡೆಯಲಿರುವ ಸಂತೋಷ್ ಟ್ರೋಫಿ ಫುಟ್‌ಬಾಲ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಕರ್ನಾಟಕ ತಂಡವು ‘ಬಿ’ ಗುಂಪಿನಲ್ಲಿ ಇರಲಿದೆ.
ಟೂರ್ನಿಯಲ್ಲಿ 12 ತಂಡಗಳು ಪಾಲ್ಗೊಳ್ಳಲಿದ್ದು, ಎರಡು ಗುಂಪಿನಲ್ಲಿ ತಲಾ ಆರು ತಂಡಗಳಿವೆ. ‘ಎ’ ಗುಂಪಿನಲ್ಲಿ ಗೋವಾ, ಅರುಣಾಚಲ ಪ್ರದೇಶ, ಮೇಘಾಲಯ, ಅಸ್ಸಾಂ, ಸರ್ವಿಸಸ್ ಮತ್ತು ಕೇರಳ ತಂಡಗಳಿದ್ದರೆ, ಬಿ ಗುಂಪಿನಲ್ಲಿ ಕರ್ನಾಟಕ, ಮಹಾರಾಷ್ಟ್ರ, ದೆಹಲಿ, ಮಣಿಪುರ, ಮಿಜೊರಾಂ ಮತ್ತು ರೈಲ್ವೇಸ್ ತಂಡಗಳು ಇವೆ. ಗುಂಪು ಹಂತದಲ್ಲಿ ಮೊದಲ ನಾಲ್ಕು ಸ್ಥಾನ ಪಡೆಯುವ ತಂಡಗಳು ಕ್ವಾರ್ಟರ್ ಫೈನಲ್ ಪ್ರವೇಶಿಸಲಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.