ADVERTISEMENT

ಸೌತ್‌ ಯುನೈಟೆಡ್‌ ಎಫ್‌ಸಿ ತಂಡಕ್ಕೆ ಜಯ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2025, 20:21 IST
Last Updated 19 ನವೆಂಬರ್ 2025, 20:21 IST
   

ಬೆಂಗಳೂರು: ಸಂಘಟಿತ ಆಟ ಆಡಿದ ಸೌತ್‌ ಯುನೈಟೆಡ್‌ ಫುಟ್‌ಬಾಲ್‌ ಕ್ಲಬ್‌ ತಂಡವು ಕೆಎಸ್‌ಎಫ್‌ಎ ಸೂಪರ್‌ ಡಿವಿಷನ್‌ ಲೀಗ್‌ ಚಾಂಪಿಯನ್‌ಷಿಪ್‌ ಪಂದ್ಯದಲ್ಲಿ ಬುಧವಾರ 4–0 ಗೋಲುಗಳಿಂದ ಎಂಇಜಿ ಆ್ಯಂಡ್‌ ಸೆಂಟರ್‌ ಫುಟ್‌ಬಾಲ್‌ ಕ್ಲಬ್‌ ವಿರುದ್ಧ ಸುಲಭ ಜಯ ದಾಖಲಿಸಿತು.

ಬೆಂಗಳೂರು ಫುಟ್‌ಬಾಲ್‌ ಕ್ರೀಡಾಂಗಣದಲ್ಲಿ ನಡೆದ ದಿನದ ಇತರ ಪಂದ್ಯಗಳಲ್ಲಿ ಕೊಡಗು ಎಫ್‌ಸಿ ತಂಡವು 4–1ರಿಂದ ಭಾರತ್‌ ಬೆಂಗಳೂರು ಎಫ್‌ಸಿ ವಿರುದ್ಧ ಹಾಗೂ ಸ್ಪೋರ್ಟಿಂಗ್‌ ಕ್ಲಬ್‌ ಬೆಂಗಳೂರು ತಂಡವು 3–1ರಿಂದ ಎಂಎಫ್‌ಎಆಎರ್‌ ಸ್ಟುಡೆಂಟ್ಸ್‌ ಯೂನಿಯನ್‌ ಎಫ್‌ಸಿ ವಿರುದ್ಧ ಜಯ ಗಳಿಸಿದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT