ಬೆಂಗಳೂರು: ಭಾರತ ಫುಟ್‌ಬಾಲ್ ತಂಡದ ನಾಯಕ ಸುನಿಲ್ ಚೆಟ್ರಿ ಅವರು ಕ್ರೀಡಾ ಉತ್ಪನ್ನಗಳ ತಯಾರಿಕಾ ಕಂಪನಿ ಪೂಮಾ ಜೊತೆ ಮಂಗಳವಾರ ಮೂರು ವರ್ಷಗಳ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.
ಚೆಟ್ರಿ ಅವರು ಅಂತರರಾಷ್ಟ್ರೀಯ ಫುಟ್‌ಬಾಲ್‌ನಲ್ಲಿ ಅತೀ ಹೆಚ್ಚು ಗೋಲುಗಳನ್ನು ದಾಖಲಿಸಿದ ಭಾರತದ ಆಟಗಾರ ಎಂಬ ಹಿರಿಮೆ ಹೊಂದಿದ್ದಾರೆ.
ಪೂಮಾ ಕಂಪನಿಯು ಈ ಹಿಂದೆ ಅಂತರರಾಷ್ಟ್ರೀಯ ಫುಟ್‌ಬಾಲ್ ಆಟಗಾರರಾದ ಆ್ಯಂಟೋಯಿನ್ ಗ್ರೀಜ್‌ಮನ್, ರೊಮೆಲು ಲುಕಾಕು, ಲೂಯಿಸ್ ಸ್ವಾರೆಜ್ ಮತ್ತು ಸರ್ಜಿಯೊ ಅಗುಯೆರಾ ಅವರೊಂದಿಗೂ ಒಪ್ಪಂದ ಮಾಡಿಕೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.