ADVERTISEMENT

ಫುಟ್‌ಬಾಲ್‌ ಟೂರ್ನಿ: ಬೆಂಗಳೂರು ಈಗಲ್ಸ್‌ಗೆ ಜಯ

ಸೂಪರ್‌ ಡಿವಿಷನ್‌ ಲೀಗ್‌ ಫುಟ್‌ಬಾಲ್‌ ಟೂರ್ನಿ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2018, 16:05 IST
Last Updated 29 ಅಕ್ಟೋಬರ್ 2018, 16:05 IST
ಸ್ಟೂಡೆಂಟ್ಸ್‌ ಯೂನಿಯನ್‌ ಎಫ್‌ಸಿ ಮತ್ತು ಬೆಂಗಳೂರು ಈಗಲ್ಸ್‌ ಎಫ್‌ಸಿ (ಹಳದಿ ಪೋಷಾಕು) ಆಟಗಾರರ ಪೈಪೋಟಿಯ ಕ್ಷಣ –ಪ್ರಜಾವಾಣಿ ಚಿತ್ರ
ಸ್ಟೂಡೆಂಟ್ಸ್‌ ಯೂನಿಯನ್‌ ಎಫ್‌ಸಿ ಮತ್ತು ಬೆಂಗಳೂರು ಈಗಲ್ಸ್‌ ಎಫ್‌ಸಿ (ಹಳದಿ ಪೋಷಾಕು) ಆಟಗಾರರ ಪೈಪೋಟಿಯ ಕ್ಷಣ –ಪ್ರಜಾವಾಣಿ ಚಿತ್ರ   

ಬೆಂಗಳೂರು: ಅಪೂರ್ವ ಆಟ ಆಡಿದ ಬೆಂಗಳೂರು ಈಗಲ್ಸ್‌ ಎಫ್‌ಸಿ ತಂಡ ಬೆಂಗಳೂರು ಜಿಲ್ಲಾ ಫುಟ್‌ಬಾಲ್‌ ಸಂಸ್ಥೆ (ಬಿಡಿಎಫ್‌ಎ) ಆಶ್ರಯದ ಸೂಪರ್‌ ಡಿವಿಷನ್‌ ಲೀಗ್‌ ಪಂದ್ಯದಲ್ಲಿ ಗೆದ್ದಿದೆ.

ಅಶೋಕನಗರದಲ್ಲಿರುವ ಬೆಂಗಳೂರು ಫುಟ್‌ಬಾಲ್‌ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಹಣಾಹಣಿಯಲ್ಲಿ ಈಗಲ್ಸ್‌ ಎಫ್‌ಸಿ 3–2 ಗೋಲುಗಳಿಂದ ಸ್ಟೂಡೆಂಟ್ಸ್‌ ಯೂನಿಯನ್‌ ಎಫ್‌ಸಿ ತಂಡವನ್ನು ಪರಾಭವಗೊಳಿಸಿತು.

ಈಗಲ್ಸ್‌ ತಂಡದ ಕಿರಣ್‌ 18ನೇ ನಿಮಿಷದಲ್ಲಿ ಗೋಲು ಬಾರಿಸಿದರು. 29ನೇ ನಿಮಿಷದಲ್ಲಿ ಸ್ಟೂಡೆಂಟ್ಸ್‌ ತಂಡದ ಸುದೀರ್‌ ಚೆಂಡನ್ನು ಗುರಿ ಮುಟ್ಟಿಸಿ 1–1ರ ಸಮಬಲಕ್ಕೆ ಕಾರಣರಾದರು. 40ನೇ ನಿಮಿಷದಲ್ಲಿ ಎಮಾನುಯೆಲ್‌ ಗೋಲು ದಾಖಲಿಸಿದ್ದರಿಂದ ಸ್ಟೂಡೆಂಟ್ಸ್‌ ತಂಡ 2–1ರ ಮುನ್ನಡೆ ಪಡೆಯಿತು.

ADVERTISEMENT

ದ್ವಿತೀಯಾರ್ಧದಲ್ಲಿ ಈಗಲ್ಸ್‌ ತಂಡ ಮಿಂಚಿತು. 87ನೇ ನಿಮಿಷದಲ್ಲಿ ಮಣಿವಣ್ಣನ್‌ ಗೋಲು ಬಾರಿಸಿ 2–2ರ ಸಮಬಲಕ್ಕೆ ಕಾರಣರಾದರು. ನಂತರ ಉಭಯ ತಂಡಗಳು ಜಿದ್ದಾಜಿದ್ದಿನ ಪೈಪೋಟಿ ನಡೆಸಿದವು. 90+1ನೇ ನಿಮಿಷದಲ್ಲಿ ಕಾಲ್ಚಳಕ ತೋರಿದ ಸುನಿಲ್‌ ಕ್ರಿಸ್ಟೋಫರ್‌, ಈಗಲ್ಸ್‌ ಪಾಳಯದಲ್ಲಿ ಸಂಭ್ರಮ ಮೂಡಿಸಿದರು.

‘ಎ’ ಡಿವಿಷನ್‌ ಲೀಗ್‌ನ ಪಂದ್ಯದಲ್ಲಿ ಎಫ್‌ಸಿ ಡೆಕ್ಕನ್‌ ತಂಡ ಜಯದ ಸಿಹಿ ಸವಿಯಿತು.ಡೆಕ್ಕನ್‌ ತಂಡ 3–1 ಗೋಲುಗಳಿಂದ ಯಂಗ್‌ ಚಾಲೆಂಜರ್ಸ್‌ ಎಫ್‌ಸಿ ತಂಡವನ್ನು ಸೋಲಿಸಿತು.

ಡೆಕ್ಕನ್‌ ತಂಡದ ಬಲರಾಮ್‌ 14ನೇ ನಿಮಿಷದಲ್ಲಿ ಚೆಂಡನ್ನು ಗುರಿ ಮುಟ್ಟಿಸಿದರು. ಉದಯ್‌ ಮತ್ತು ಸೂರ್ಯ ಕ್ರಮವಾಗಿ 56 ಮತ್ತು 73ನೇ ನಿಮಿಷಗಳಲ್ಲಿ ಗೋಲು ಬಾರಿಸಿದರು.ಯಂಗ್‌ ಚಾಲೆಂಜರ್ಸ್‌ ತಂಡದ ಪ್ರವೀಣ್‌ 67ನೇ ನಿಮಿಷದಲ್ಲಿ ಕಾಲ್ಚಳಕ ತೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.