ADVERTISEMENT

148 ಅಥ್ಲೀಟ್‌ಗಳಿಗೆ ಲಸಿಕೆ: ಬಾತ್ರಾ

ಪಿಟಿಐ
Published 22 ಮೇ 2021, 14:26 IST
Last Updated 22 ಮೇ 2021, 14:26 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ:ಒಲಿಂಪಿಕ್ಸ್‌ಗೆ ಅರ್ಹತೆ ಪಡೆದವರು ಸೇರಿದಂತೆ ದೇಶದ 148 ಕ್ರೀಡಾಪಟುಗಳು ಕೋವಿಡ್–19 ಲಸಿಕೆ ಪಡೆದುಕೊಂಡಿದ್ದಾರೆ ಎಂದು ಭಾರತ ಒಲಿಂಪಿಕ್ ಸಂಸ್ಥೆಯ (ಐಒಎ) ಅಧ್ಯಕ್ಷ ನರೀಂದರ್ ಬಾತ್ರಾ ತಿಳಿಸಿದ್ದಾರೆ.

‘148ರ ಪೈಕಿ 17 ಮಂದಿ ಎರಡನೇ ಡೋಸ್‌ ಸ್ವೀಕರಿಸಿದ್ದರೆ, 131 ಅಥ್ಲೀಟ್‌ಗಳು ಮೊದಲ ಡೋಸ್ ಪಡೆದುಕೊಂಡಿದ್ದಾರೆ‘ ಎಂದು ಬಾತ್ರಾ ಮಾಹಿತಿ ನೀಡಿದರು.

ಟೋಕಿಯೊ ಪ್ಯಾರಾಲಿಂಪಿಕ್ಸ್‌ಗೆ ತೆರಳಲಿರುವ 13 ಅಥ್ಲೀಟ್‌ಗಳಿಗೂ ಲಸಿಕೆಯ ಮೊದಲ ಡೋಸ್ ನೀಡಲಾಗಿದೆ.

ADVERTISEMENT

ಇದುವರೆಗೆ ಭಾರತದ 90ಕ್ಕೂ ಹೆಚ್ಚು ಅಥ್ಲೀಟ್‌ಗಳು ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.