ಬೆಂಗಳೂರು: ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯದ ಅಥ್ಲೆಟಿಕ್ಸ್‌ನಲ್ಲಿ ಇ.ಬಿ.ಅರ್ಪಿತಾ ಎರಡನೇ ಸ್ಥಾನ ಪಡೆದಿದ್ದಾರೆ.
ಭುವನೇಶ್ವರದ ಕಳಿಂಗಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ ಮತ್ತು ಕೆಐಐಟಿ ಆಫ್ ಇನ್‌ಸ್ಟಿಟ್ಯೂಷನ್‌ನಲ್ಲಿ ಕ್ರೀಡಾಕೂಟ ನಡೆಯಿತು. ಬೆಂಗಳೂರಿನ ಸಿಮ್ಸ್ ಇನ್‌ಸ್ಟಿಟ್ಯೂಟ್‌ನ ವಿದ್ಯಾರ್ಥಿನಿ ಅರ್ಪಿತಾ ಮಹಿಳೆಯರ 800 ಮೀಟರ್ ಓಟದಲ್ಲಿ ಇ.ಬಿ. ಅರ್ಪಿತಾ(02:06:25 ಸೆಕೆಂಡು) ಗುರಿ ಮುಟ್ಟಿ ಎರಡನೇ ಸ್ಥಾನ ಪಡೆದರು.ಅರ್ಪಿತಾ ಅವರಿಗೆ ಸೌಂದರ್ಯ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಅಂಡ್ ಸೈನ್ಸ್ (ಸಿಮ್ಸ್) ವಿಶ್ವವಿದ್ಯಾನಿಲಯದ ಪ್ರಾಂಶುಪಾಲ ಡಾ.ವಾಸು ಬಿ.ಎ. ಅಭಿನಂದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.