ADVERTISEMENT

ಅಖಿಲ ಭಾರತ ಈಜು ಚಾಂಪಿಯನ್‌ಷಿಪ್‌ 1ಕ್ಕೆ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2018, 20:02 IST
Last Updated 29 ಆಗಸ್ಟ್ 2018, 20:02 IST

ಹುಬ್ಬಳ್ಳಿ: ನೈರುತ್ಯ ರೈಲ್ವೆ ವಲಯದ ಕ್ರೀಡಾ ಸಂಘಟನೆಯು ಸೆ. 1ರಿಂದ 5ರ ವರೆಗೆ ಇಲ್ಲಿನ ಮಹಾನಗರ ಪಾಲಿಕೆಯ ಈಜುಕೊಳದಲ್ಲಿ 59ನೇ ಅಖಿಲ ಭಾರತ ರೈಲ್ವೆ ಈಜು ಚಾಂಪಿಯನ್‌ಷಿಪ್‌ ಆಯೋಜಿಸಿದೆ.

ಭಾರತದ ವಿವಿಧ ರೈಲ್ವೆ ವಲಯಗಳ 250 ಈಜುಪಟುಗಳು ಭಾಗವಹಿಸಲಿದ್ದಾರೆ. 54 ತಾಂತ್ರಿಕ ಅಧಿಕಾರಿಗಳು ನೆರವು ನೀಡಲಿದ್ದು, ನೈಋತ್ಯ ರೈಲ್ವೆ ವಿಭಾಗೀಯ ವ್ಯವಸ್ಥಾಪಕ ರಾಜೇಶ ಮೋಹನ್‌ ಅವರು ಚಾಂಪಿಯನ್‌ಷಿಪ್‌ಗೆ ಚಾಲನೆ ಕೊಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT