
ಪ್ರಜಾವಾಣಿ ವಾರ್ತೆ
ಬೆಂಗಳೂರು: ಕರ್ನಾಟಕದ ಕುಸ್ತಿಪಟು ಅರ್ಜುನ್ ಹಲಕುರ್ಕಿ ಅವರು ಕಜಕಸ್ತಾನದಲ್ಲಿ ನಡೆಯಲಿರುವ ಏಷ್ಯನ್ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಸ್ಪರ್ಧಿಸುವ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಭಾನುವಾರ ಸೋನೆಪತ್‌ನಲ್ಲಿ ನಡೆದ ಡಬ್ಲ್ಯುಎಫ್‌ಐ ಆಯೋಜಿಸಿದ್ದ ಆಯ್ಕೆ ಟ್ರಯಲ್ಸ್‌ನಲ್ಲಿ ಗ್ರಿಕೊ ರೋಮನ್ 55 ಕೆ.ಜಿ ವಿಭಾಗದಲ್ಲಿ ಚಿನ್ನ ಗೆದ್ದು ಅರ್ಹತೆ ಗಳಿಸಿದ್ದಾರೆಂದು ಕರ್ನಾಟಕದ ಕುಸ್ತಿ ಸಂಸ್ಥೆ ಅಧ್ಯಕ್ಷ ಬಿ. ಗುಣ ರಂಜನ್ ಶೆಟ್ಟಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.