ರಮೇಶ್ ಬೂದಿಹಾಳ
ಪ್ರಜಾವಾಣಿ ಸಂಗ್ರಹ ಚಿತ್ರ
ಚೆನ್ನೈ: ಕರ್ನಾಟಕದ ರಮೇಶ್ ಬೂದಿಹಾಳ ಅವರು ಇಲ್ಲಿ ನಡೆಯುತ್ತಿರುವ ಏಷ್ಯನ್ ಸರ್ಫಿಂಗ್ ಚಾಂಪಿಯನ್‌ಷಿಪ್‌ನ ಪುರುಷರ ವಿಭಾಗದಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ.
ಈ ಮೂಲಕ ಏಷ್ಯನ್ ಸರ್ಫಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಪದಕ ಗೆದ್ದ ಭಾರತ ಮೊದಲಿಗ ಹಾಗೂ ಪದಕ ಸುತ್ತನ್ನು ತಲುಪಿದ ಭಾರತದ ಮೊದಲ ಸರ್ಫರ್ ಎಂಬ ಹೆಗ್ಗಳಿಕೆಗೂ ಅವರು ಪಾತ್ರವಾದರು.
ರಮೇಶ್ ಅವರು 12.60 ಅಂಕಗಳಿಂದ ಕಂಚಿನ ಪದಕಕ್ಕೆ ಮುತ್ತಿಕ್ಕಿದ್ದಾರೆ.
ಕೊರಿಯಾದ ಕನೋವಾ ಹೀಜೆ 15.17 ಅಂಕದೊಂದಿಗೆ ಚಿನ್ನದ ಪದಕ ಗೆದ್ದರೆ, ಇಂಡೊನೇಷ್ಯಾದ ಪಜರ್ ಅರಿಯಾನಾ 14.57 ಅಂಕ ಗಳಿಸಿ ಬೆಳ್ಳಿ ಪದಕ ತಮ್ಮದಾಗಿಸಿಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.