ADVERTISEMENT

ಕಬಡ್ಡಿ ಆಟಗಾರ್ತಿಯರಿಗೆ ಶೌಚಾಲಯದಲ್ಲಿಟ್ಟ ಆಹಾರ ವಿತರಣೆ: ಅಧಿಕಾರಿ ಅಮಾನತು

ಪಿಟಿಐ
Published 20 ಸೆಪ್ಟೆಂಬರ್ 2022, 13:45 IST
Last Updated 20 ಸೆಪ್ಟೆಂಬರ್ 2022, 13:45 IST
   

ಸಹರಾನ್‌ಪುರ, ಉತ್ತರಪ್ರದೇಶ: ಇಲ್ಲಿ ನಡೆದ ರಾಜ್ಯಮಟ್ಟದ ಕಬಡ್ಡಿ ಟೂರ್ನಿಯಲ್ಲಿ ಮಹಿಳಾ ಆಟಗಾರ್ತಿಯರಿಗೆ ಶೌಚಾಲಯದಲ್ಲಿ ಶೇಕರಿಸಿಟ್ಟ ಆಹಾರ ಪೂರೈಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಕ್ರೀಡಾ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದೆ.

ಇದೇ 16ರಂದು ನಡೆದಿದೆ ಎನ್ನಲಾದ ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಡಾ. ಭೀಮರಾವ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಸಬ್‌ಜೂನಿಯರ್ ಟೂರ್ನಿಯಲ್ಲಿ ಭಾಗವಹಿಸಿದ್ದ ಆಟಗಾರ್ತಿಯರಿಗೆ ಶೌಚಾಲಯದಲ್ಲಿಟ್ಟಿದ್ದ ಅನ್ನ ಮತ್ತು ಪೂರಿ ವಿತರಿಸಿದ್ದು ವಿಡಿಯೊದಲ್ಲಿ ಕಂಡುಬಂದಿತ್ತು.

ಸೆಪ್ಟೆಂಬರ್ 18ರವರೆಗೆ ನಡೆದ ಈ ಟೂರ್ನಿಯಲ್ಲಿ 16 ಡಿವಿಷನ್‌ಗಳ 300ಕ್ಕೂ ಹೆಚ್ಚು ಆಟಗಾರ್ತಿಯರು ಪಾಲ್ಗೊಂಡಿದ್ದರು. ಘಟನೆಯ ಕುರಿತು ಜಿಲ್ಲಾ ಮ್ಯಾಜಿಸ್ಟ್ರೇಟ್‌ ಅಖಿಲೇಶ್ ಸಿಂಗ್ ಅವರು ತನಿಖೆಗೆ ಆದೇಶಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.