ದಾವಣಗೆರೆ: ಇಲ್ಲಿನ ನೇತಾಜಿ ಸುಭಾಷ್‌ಚಂದ್ರ ಬೋಸ್ ಒಳಾಂಗಣ ಕ್ರೀಡಾಂಗಣದಲ್ಲಿ ಅ.13 ರಿಂದ 19ರವರೆಗೆ 15 ಮತ್ತು 17 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್ ನಡೆಯಲಿದೆ.
ರಾಜ್ಯ ಬ್ಯಾಡ್ಮಿಂಟನ್ ಸಂಸ್ಥೆಯ (ಕೆಬಿಎ) ಸಹಯೋಗದಲ್ಲಿ ದಾವಣಗೆರೆ ಜಿಲ್ಲಾ ಬ್ಯಾಡ್ಮಿಂಟನ್ ಸಂಸ್ಥೆ (ಡಿಡಿಬಿಎ) ಚಾಂಪಿಯನ್‌ಷಿಪ್ ಆಯೋಜಿಸಿದೆ. ಸಿಂಗಲ್ಸ್, ಡಬಲ್ಸ್ ಹಾಗೂ ಮಿಶ್ರ ಡಬಲ್ಸ್ ವಿಭಾಗಗಳಲ್ಲಿ ಪಂದ್ಯಗಳು ಜರುಗಲಿವೆ.
ಒಟ್ಟು ₹1.76 ಲಕ್ಷ ಬಹುಮಾನ ಮೊತ್ತದ ಚಾಂಪಿಯನ್‌ಷಿಪ್ ಇದಾಗಿದೆ. 15 ವರ್ಷದೊಳಗಿನವರ ಬಾಲಕರ ಸಿಂಗಲ್ಸ್‌ನಲ್ಲಿ 149, ಬಾಲಕಿಯರ ಸಿಂಗಲ್ಸ್‌ನಲ್ಲಿ 97 ಹಾಗೂ 17 ವರ್ಷದೊಳಗಿನವರ ಬಾಲಕರ ಸಿಂಗಲ್ಸ್‌ನಲ್ಲಿ 206 ಮತ್ತು ಬಾಲಕಿಯರ ಸಿಂಗಲ್ಸ್‌ನಲ್ಲಿ 118 ಮಂದಿ ಕಣಕ್ಕಿಳಿಯಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.