ADVERTISEMENT

ಸಹೋದರಿ ಜತೆ ಬಿಜೆಪಿ ಸೇರಿದ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್

ಪ್ರಧಾನಿ ನರೇಂದ್ರ ಮೋದಿಯೇ ಸ್ಫೂರ್ತಿ ಎಂದ ನೆಹ್ವಾಲ್

ಏಜೆನ್ಸೀಸ್
Published 29 ಜನವರಿ 2020, 7:54 IST
Last Updated 29 ಜನವರಿ 2020, 7:54 IST
ಸಹೋದರಿ ಚಂದ್ರಾಂಶು ಜತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸೈನಾ ನೆಹ್ವಾಲ್
ಸಹೋದರಿ ಚಂದ್ರಾಂಶು ಜತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸೈನಾ ನೆಹ್ವಾಲ್   

ನವದೆಹಲಿ:ಬಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಸೈನಾ ಸಹೋದರಿ ಚಂದ್ರಾಂಶು ಸಹ ಬಿಜೆಪಿ ಸೇರಿದ್ದಾರೆ. ಪಕ್ಷ ಸೇರಿದ ಬಳಿಕ ಇಬ್ಬರೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿದ್ದಾರೆ.

‘ನಾನು ದೇಶಕ್ಕಾಗಿ ಅನೇಕ ಮೆಡಲ್‌ಗಳನ್ನು ಜಯಿಸಿದ್ದೇನೆ. ನಾನು ಕಠಿಣ ಪರಿಶ್ರಮಿಯಾಗಿದ್ದು ಕಠಿಣ ಪರಿಶ್ರಮಪಡುವವರನನ್ನು ಇಷ್ಟಪಡುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕಾಗಿ ಕೆಲಸ ಮಾಡುವುದನ್ನು ನೋಡಿದ್ದೇನೆ. ಅವರ ಜತೆ ಸೇರಿ ನಾನೂ ದೇಶಕ್ಕಾಗಿ ಕೆಲಸ ಮಾಡಬೇಕು ಎಂದು ಬಯಸುತ್ತೇನೆ’ ಎಂದು ಸೈನಾ ಹೇಳಿದ್ದಾರೆ.

ADVERTISEMENT

ಮೋದಿ ಅವರಿಂದ ಸಾಕಷ್ಟು ಸ್ಫೂರ್ತಿ ಪಡೆದಿರುವುದಾಗಿಯೂ ಅವರು ಹೇಳಿದ್ದಾರೆ.

ಹರಿಯಾಣದ ಹಿಸಾರ್‌ನಲ್ಲಿ 1990ರ ಮಾರ್ಚ್ 17ರಂದು ಜನಿಸಿದ್ದಸೈನಾ 2015ರಲ್ಲಿ ವಿಶ್ವ ಬ್ಯಾಡ್ಮಿಂಟನ್‌ ರ್‍ಯಾಂಕಿಂಗ್‌ನಲ್ಲಿ ಅಗ್ರ ಸ್ಥಾನಕ್ಕೇರಿದ್ದರು. ಈ ಶ್ರೇಯಕ್ಕೆ ಪಾತ್ರರಾದ ಮೊದಲ ಭಾರತೀಯ ಆಟಗಾರ್ತಿಎಂಬ ಹೆಗ್ಗಳಿಕೆಯೂ ಅವರದ್ದಾಗಿದೆ. ಸದ್ಯ ಅವರುವಿಶ್ವ ಬ್ಯಾಡ್ಮಿಂಟನ್‌ ರ್‍ಯಾಂಕಿಂಗ್‌ನಲ್ಲಿ 9ನೇ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.