ADVERTISEMENT

ಬಿಬಿಎಫ್‌ಐ ಪ್ರಧಾನ ಕಾರ್ಯದರ್ಶಿಯಾಗಿ ದಿನೇಶ್‌ ಆಯ್ಕೆ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2019, 16:02 IST
Last Updated 22 ಅಕ್ಟೋಬರ್ 2019, 16:02 IST
ದಿನೇಶ್‌
ದಿನೇಶ್‌   

ಬೆಂಗಳೂರು: ಕರ್ನಾಟಕದ ದಿನೇಶ್‌ ಅವರು ಭಾರತ ಬಾಲ್‌ ಬ್ಯಾಡ್ಮಿಂಟನ್‌ ಫೆಡರೇಷನ್‌ನ (ಬಿಬಿಎಫ್‌ಐ) ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ಹಾಸನದ ದಿನೇಶ್‌, ಮುಂದಿನ ನಾಲ್ಕು ವರ್ಷಗಳ ಕಾಲ ಈ ಹುದ್ದೆಯಲ್ಲಿ ಇರಲಿದ್ದಾರೆ. ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಕನ್ನಡಿಗ ಎಂಬ ಹಿರಿಮೆಗೂ ಭಾಜನರಾಗಿದ್ದಾರೆ.

ಬಾಲ್‌ ಬ್ಯಾಡ್ಮಿಂಟನ್‌ ಅಸೋಸಿಯೇಷನ್‌ ಆಫ್‌ ಕರ್ನಾಟಕದ ಕಾರ್ಯದರ್ಶಿ ಆಗಿರುವ ದಿನೇಶ್‌, ಈ ಹಿಂದೆ ರಾಷ್ಟ್ರೀಯ ಫೆಡರೇಷನ್‌ನ ಉಪಾಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.