ಬ್ಯಾಸ್ಕೆಟ್‌ಬಾಲ್
ಚೆನ್ನೈ: ಭಾರತ ಪುರುಷರ ಬ್ಯಾಸ್ಕೆಟ್‌ಬಾಲ್ ತಂಡಕ್ಕೆ ಮತ್ತೆ ಸ್ಕಾಟ್ ಫ್ಲೆಮಿಂಗ್ ಅವರನ್ನು ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ.
ಭಾನುವಾರ ನಡೆದ ಭಾರತ ಬ್ಯಾಸ್ಕೆಟ್‌ಬಾಲ್ ಫೆಡರೇಷನ್ (ಬಿಎಫ್‌ಐ) ಸರ್ವಸದಸ್ಯರ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಲಾಯಿತು.
2012–2015ರ ಅವಧಿಯಲ್ಲಿ ಭಾರತ ತಂಡದ ಮುಖ್ಯ ಕೋಚ್ ಆಗಿದ್ದರು. ಅವರು ಈ ಹಿಂದೆ ಎನ್‌ಬಿಎ ಇಂಡಿಯಾ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು.
ಭಾರತದ ಕೋಚ್ ಆಗುವ ಮುನ್ನ ಅವರು 2010–12ರ ಅವಧಿಯಲ್ಲಿ ಟೆಕ್ಸಾಸ್ ಲೆಜೆಂಡ್ಸ್ ಕೋಚ್ ಆಗಿದ್ದರು.
ಅವರ ಮಾರ್ಗದರ್ಶನದಲ್ಲಿ ಭಾರತ ತಂಡವು ದಕ್ಷಿಣ ಏಷ್ಯಾ ಚಾಂಪಿಯನ್‌ಷಿಪ್ (2014 ಹಾಗೂ 2015)ಗಳಲ್ಲಿ ಚಿನ್ನ ಜಯಿಸಿತ್ತು.
3X3 ತಂಡಕ್ಕೆ ಪೂರ್ಣಾವಧಿ ಕೋಚ್ ನೇಮಕ ಮಾಡಲೂ ಈ ಸಂದರ್ಭದಲ್ಲಿ ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.