ADVERTISEMENT

ಭಾರತದಲ್ಲಿ ಒಲಿಂಪಿಕ್ಸ್‌ ಅರ್ಹತಾ ಬ್ಯಾಸ್ಕೆಟ್‌ಬಾಲ್‌

ಪಿಟಿಐ
Published 8 ಅಕ್ಟೋಬರ್ 2019, 13:29 IST
Last Updated 8 ಅಕ್ಟೋಬರ್ 2019, 13:29 IST

ನವದೆಹಲಿ: ಮುಂದಿನ ವರ್ಷದ ಮಾರ್ಚ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್‌ ಅರ್ಹತಾ 3X3 ಬ್ಯಾಸ್ಕೆಟ್‌ಬಾಲ್‌ ಟೂರ್ನಿಗೆ ಭಾರತ ಆತಿಥ್ಯ ವಹಿಸಲಿದೆ. ಈ ವಿಷಯವನ್ನು ಅಂತರರಾಷ್ಟ್ರೀಯ ಬ್ಯಾಸ್ಕೆಟ್‌ಬಾಲ್‌ ಫೆಡರೇಷನ್‌ (ಫಿಬಾ), ಮಂಗಳವಾರ ತಿಳಿಸಿದೆ.

ಪುರುಷರ ಮತ್ತು ಮಹಿಳಾ ವಿಭಾಗಗಳಲ್ಲಿ ನಡೆಯುವ ಈ ಟೂರ್ನಿಯಲ್ಲಿ ಒಟ್ಟು 40 ತಂಡಗಳು ಭಾಗವಹಿಸಲಿವೆ.

‘ಒಲಿಂಪಿಕ್ಸ್‌ ಅರ್ಹತಾ ಟೂರ್ನಿ ಆಯೋಜಿಸುವ ಅವಕಾಶ ಸಿಕ್ಕಿರುವುದು ಖುಷಿಯ ವಿಚಾರ. ತವರಿನಲ್ಲಿ ಪಂದ್ಯಗಳನ್ನು ಆಡುವುದರಿಂದ ನಮ್ಮ ತಂಡಗಳಿಗೆ ಹೆಚ್ಚು ಲಾಭವಾಗಲಿದೆ. ಟೋಕಿಯೊ ಒಲಿಂಪಿಕ್ಸ್‌ಗೆ ರಹದಾರಿ ಪಡೆಯಲು ಅನುಕೂಲವಾಗಲಿದೆ’ ಎಂದು ಭಾರತ ಬ್ಯಾಸ್ಕೆಟ್‌ಬಾಲ್‌ ಫೆಡರೇಷನ್‌ (ಬಿಎಫ್‌ಐ) ಅಧ್ಯಕ್ಷ ಕೆ.ಗೋವಿಂದರಾಜ್‌ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.