ADVERTISEMENT

ಬೆಂಗಳೂರು ನಗರ ವಿವಿ ಚಾಂಪಿಯನ್

ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಹಾಕಿ ಚಾಂಪಿಯನ್‌ಷಿಪ್‌

​ಪ್ರಜಾವಾಣಿ ವಾರ್ತೆ
Published 1 ಜನವರಿ 2022, 7:51 IST
Last Updated 1 ಜನವರಿ 2022, 7:51 IST
ಬೆಂಗಳೂರು ವಿವಿ ಮತ್ತು ಬೆಂಗಳೂರು ನಗರ ವಿವಿ ತಂಡಗಳ ಆಟಗಾರರು ಚೆಂಡಿನ ಮೇಲೆ ಹಿಡಿತ ಸಾಧಿಸಲು ಪ್ರಯತ್ನಿಸಿದರು
ಬೆಂಗಳೂರು ವಿವಿ ಮತ್ತು ಬೆಂಗಳೂರು ನಗರ ವಿವಿ ತಂಡಗಳ ಆಟಗಾರರು ಚೆಂಡಿನ ಮೇಲೆ ಹಿಡಿತ ಸಾಧಿಸಲು ಪ್ರಯತ್ನಿಸಿದರು   

ಬೆಂಗಳೂರು: ಅಂತಿಮ ಪಂದ್ಯದಲ್ಲೂ ಅಮೋಘ ಆಟ ಮುಂದುವರಿಸಿದ ಬೆಂಗಳೂರು ನಗರ ವಿಶ್ವವಿದ್ಯಾಲಯ ತಂಡ ಶುಕ್ರವಾರ ಕೊನೆಗೊಂಡ ದಕ್ಷಿಣ ವಲಯ ಅಂತರ ವಿವಿ ಹಾಕಿ ಟೂರ್ನಿಯ ಪ್ರಶಸ್ತಿ ಗೆದ್ದುಕೊಂಡಿತು.

ಭಾರತೀಯ ವಿಶ್ವವಿದ್ಯಾಲಯಗಳ ಸಂಘ ಮತ್ತು ಬೆಂಗಳೂರು ವಿಶ್ವವಿದ್ಯಾಲಯ ಜಂಟಿಯಾಗಿ ಆಯೋಜಿಸಿದ್ದ ಚಾಂಪಿಯನ್‌ಷಿಪ್‌ನ ಸೆಮಿಫೈನಲ್ ಸೂಪರ್ ಲೀಗ್ ಪಂದ್ಯದಲ್ಲಿ ಬೆಂಗಳೂರು ನಗರ ವಿವಿ 3–1ರಲ್ಲಿ ಬೆಂಗಳೂರು ವಿವಿಯನ್ನು ಸೋಲಿಸಿತು. ಈ ಮೂಲಕ ಪ್ರಶಸ್ತಿ ತನ್ನದಾಗಿಸಿಕೊಂಡಿತು. ಆತಿಥೇಯ ತಂಡ ರನ್ನರ್ ಅಪ್‌ ಪ್ರಶಸ್ತಿಗೆ ಸಮಾಧಾನಪಟ್ಟುಕೊಂಡಿತು.

ತಿರುನಲ್ವೇಲಿಯ ಮನೋನ್ಮಣಿಯಂ ಸುಂದರರ್ ವಿವಿ ಮೂರನೇ ಸ್ಥಾನ ಮತ್ತು ಚೆನ್ನೈನ ಎಸ್‌.ಆರ್‌.ಎಂ ವಿವಿ ನಾಲ್ಕನೇ ಸ್ಥಾನ ಗಳಿಸಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.