
ಪ್ರಜಾವಾಣಿ ವಾರ್ತೆಸಾಂದರ್ಭಿಕ ಚಿತ್ರ
ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ಅಥ್ಲೆಟಿಕ್ ಸಂಸ್ಥೆಯು (ಬಿಯುಡಿಎಎ) ಜಿಲ್ಲಾಮಟ್ಟದ ಅಥ್ಲೆಟಿಕ್ ಕೂಟವನ್ನು ಕಂಠೀರವ ಕ್ರೀಡಾಂಗಣದಲ್ಲಿ ಬುಧವಾರ ಆಯೋಜಿಸಿದೆ.
ಭಾರತ ಅಥ್ಲೆಟಿಕ್ ಫೆಡರೇಶನ್ ಆಯೋಜಿಸುವ ರಾಷ್ಟ್ರೀಯ ಅಂತರ ಜಿಲ್ಲಾ ಜೂನಿಯರ್ (14 ಮತ್ತು 16 ವರ್ಷದೊಳಗಿನವರ) ಅಥ್ಲೆಟಿಕ್ ಚಾಂಪಿಯನ್‌ಷಿಪ್‌ಗೆ ತಂಡವನ್ನು ಆಯ್ಕೆ ಮಾಡಲು ಈ ಕೂಟವನ್ನು ಆಯೋಜಿಸಲಾಗಿದೆ.
ನಗರ ಜಿಲ್ಲಾ ವ್ಯಾಪ್ತಿಯ ಎಲ್ಲ ಶಾಲಾ ಕಾಲೇಜುಗಳು, ಟ್ರ್ಯಾಕ್ ಮತ್ತು ಫೀಲ್ಡ್ ಕ್ಲಬ್‌ಗಳ ಸ್ಪರ್ಧಿಗಳು ಕೂಟದಲ್ಲಿ ಭಾಗವಹಿಸಬಹುದು ಎಂದು ಬಿಯುಡಿಎಎ ಅಧ್ಯಕ್ಷ ಯು.ವಿ. ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: ಮೊ. 9481094580 ಅಥವಾ 9845626244 ಸಂಪರ್ಕಿಸಬೇಕು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.