
ಪ್ರಜಾವಾಣಿ ವಾರ್ತೆ
ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ಟೇಬಲ್ ಟೆನಿಸ್ ಸಂಸ್ಥೆಯು ಇದೇ 17 ಮತ್ತು 18ರಂದು ಅಂತರ ಶಾಲಾ ಟೇಬಲ್ ಟೆನಿಸ್ ಚಾಂಪಿಯನ್‌ಷಿಪ್ ಅನ್ನು ಆಯೋಜಿಸುತ್ತಿದೆ. ರಾಜ್ಯ ಟೇಬಲ್ ಟೆನಿಸ್ ಸಂಸ್ಥೆಯ ಆಶ್ರಯದಲ್ಲಿ ಈ ಚಾಂಪಿಯನ್‌ಷಿಪ್ ನಡೆಯಲಿದೆ.
1ರಿಂದ 7ನೇ ತರಗತಿವರೆಗಿನ ವಿದ್ಯಾರ್ಥಿಗಳು ಸಬ್‌ಜೂನಿಯರ್ ವಿಭಾಗದಲ್ಲಿ ಹಾಗೂ 8ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಜೂನಿಯರ್ ವಿಭಾಗದಲ್ಲಿ ಸ್ಪರ್ಧಿಸಬಹುದಾಗಿದೆ.
ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ ಸ್ಪರ್ಧೆಗಳು ಇರಲಿವೆ. ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿರುವ ಶಾಲೆಗಳ ವಿದ್ಯಾರ್ಥಿಗಳು ಮಾತ್ರ ಟೂರ್ನಿಯಲ್ಲಿ ಭಾಗವಹಿಸಬಹುದಾಗಿದೆ.
ನೋಂದಣಿಗೆ ಇದೇ 12 ಕೊನೆಯ ದಿನ. ವಿವರಗಳಿಗೆ ಮೊಬೈಲ್ ಸಂ. 98863 11359 ಅಥವಾ 99450 22469 ಅನ್ನು ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.