ಪತಿಯೊಂದಿಗೆ ಮೇರಿ ಕೋಮ್
ಚಿತ್ರ: ಇನ್‌ಸ್ಟಾಗ್ರಾಂ
ನವದೆಹಲಿ: ಒಲಿಂಪಿಕ್ ಪದಕ ವಿಜೇತೆ ಬಾಕ್ಸರ್ ಮೇರಿ ಕೋಮ್ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದ್ದು, ಪತಿಯಿಂದ ಪತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದು ವರದಿಯಾಗಿದೆ.
2005ರಲ್ಲಿ ಮೇರಿ ಕೋಮ್ ಅವರು ಪತಿ ಒನ್ಲರ್ ಕರೋಂಗ್ ಅವರನ್ನು ವರಿಸಿದ್ದರು. ದಂಪತಿಗೆ ನಾಲ್ಕು ಮಕ್ಕಳಿದ್ದಾರೆ.
2022ರ ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ಒನ್ಲರ್ ಅವರು ಚುನಾವಣಾ ಪ್ರಚಾರಕ್ಕೆ ಅಂದಾಜು ₹2ರಿಂದ ₹3 ಕೋಟಿ ವ್ಯಯಿಸಿದ್ದರು. ಇದು ದಂಪತಿಯ ನಡುವೆ ಅಸಮಾಧಾನಕ್ಕೆ ಕಾರಣವಾಗಿತ್ತು ಎಂದು ಸುದ್ದಿ ಸಂಸ್ಥೆ ಎನ್‌ಡಿಟಿವಿ ವರದಿ ಮಾಡಿದೆ.
ಮೇರಿ ತನ್ನ ನಾಲ್ವರು ಮಕ್ಕಳೊಂದಿಗೆ ಫರಿದಾಬಾದ್‌ನಲ್ಲಿರುವ ತಮ್ಮ ಮನೆಯಲ್ಲಿ ವಾಸಿಸುತ್ತಿದ್ದು, ಒನ್ಲರ್ ಅವರು ದೆಹಲಿಯಲ್ಲಿ ಕುಟುಂಬ ಸದಸ್ಯರೊಂದಿಗೆ ಇದ್ದಾರೆ ಎಂದು ತಿಳಿದುಬಂದಿದೆ.
43 ವರ್ಷದ ಮೇರಿ ಕೋಮ್ ಅವರು ಆರು ಬಾರಿ ವಿಶ್ವ ಮಹಿಳಾ ಚಾಂಪಿಯನ್ ಬಾಕ್ಸಿಂಗ್ ಗೆದ್ದಿದ್ದು, 2012ರ ಲಂಡನ್ ಒಲಿಂಪಿಕ್‌ನ ಕಂಚಿನ ಪದಕ ವಿಜೇತೆಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.