ADVERTISEMENT

ಒಲಿಂಪಿಕ್ಸ್‌ನಲ್ಲಿ ಬಾಕ್ಸಿಂಗ್‌ಗೆ ಅವಕಾಶಕ್ಕಾಗಿ ಪ್ರಯತ್ನ

ಏಜೆನ್ಸೀಸ್
Published 1 ಡಿಸೆಂಬರ್ 2018, 14:18 IST
Last Updated 1 ಡಿಸೆಂಬರ್ 2018, 14:18 IST

ಟೋಕಿಯೊ: ಅಂತರರಾಷ್ಟ್ರೀಯ ಒಲಿಂಪಿಕ್‌ ಸಮಿತಿಯ ವಿರೋಧದ ನಡುವೆಯೂ 2020ರ ಒಲಿಂಪಿಕ್ಸ್‌ನಲ್ಲಿ ಬಾಕ್ಸಿಂಗ್ ಸ್ಪರ್ಧೆಯನ್ನು ಸೇರಿಸಲು ಆಯೋಜಕರು ಪ್ರಯತ್ನಿಸುತ್ತಿದ್ದಾರೆ. ಅಂತರರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಲು ಮುಂದಾಗಿರುವ ಒಲಿಂಪಿಕ್ಸ್ ಸಮಿತಿ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಈ ಸ್ಪರ್ಧೆ ನಡೆಯದಂತೆ ನೋಡಿಕೊಳ್ಳುವುದಾಗಿ ಶುಕ್ರವಾರ ಹೇಳಿತ್ತು.

ಆದರೆ ಟೋಕಿಯೊ ಒಲಿಂಪಿಕ್ಸ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತೊಶಿರೊ ಮೂಟೊ ಶನಿವಾರ ಮಾತನಾಡಿ ‘ಬಾಕ್ಸಿಂಗ್ ಸೇರಿಸುವ ಕುರಿತ ಅಧಿಕಾರಿಗಳ ಜೊತೆಗಿನ ಮಾತುಕತೆಗೆ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ ನಿರ್ಧಾರದಿಂದ ಧಕ್ಕೆಯಾಗಿದೆ’ ಎಂದರು. ‘ಬಾಕ್ಸಿಂಗ್‌ಗೆ ಸಂಬಂಧಿಸಿದ ಕೆಲಸಗಳು ಮುಂದುವರಿದಿವೆ’ ಎಂದು ಅವರು ವಿವರಿಸಿದರು.

‘ಬಾಕ್ಸಿಂಗ್ ಸೇರಿಸುವ ಕುರಿತ ಅಂತರರಾಷ್ಟ್ರೀಯ ಒಲಿಂಪಿಕ್‌ ಸಮಿತಿಯ ಅಂತಿಮ ನಿರ್ಧಾರ ಮುಂದಿನ ಜೂನ್‌ ತಿಂಗಳ ಒಳಗೆ ಬರುವ ಸಾಧ್ಯತೆ ಇಲ್ಲ’ ಎಂದೂ ಅವರು ಸ್ಪಷ್ಟಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.