ADVERTISEMENT

ವೇಟ್ ಲಿಫ್ಟಿಂಗ್ ವಿಶ್ವ ಚಾಂಪಿಯನ್‌ಷಿಪ್‌: ಮೀರಾಬಾಯಿ ನಾಯಕಿ

ಪಿಟಿಐ
Published 9 ಸೆಪ್ಟೆಂಬರ್ 2019, 13:42 IST
Last Updated 9 ಸೆಪ್ಟೆಂಬರ್ 2019, 13:42 IST
ಮೀರಾಬಾಯಿ ಚಾನು
ಮೀರಾಬಾಯಿ ಚಾನು   

ನವದೆಹಲಿ: ಮೀರಾಬಾಯಿ ಚಾನು, ಥಾಯ್ಲೆಂಡ್‌ನ ಪಟ್ಟಾಯದಲ್ಲಿ ಇದೇ 18ರಿಂದ 27ರ ವರೆಗೆ ನಡೆಯಲಿರುವ ವೇಟ್‌ಲಿಫ್ಟಿಂಗ್ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಪಾಲ್ಗೊಳ್ಳುವ ಭಾರತ ತಂಡವನ್ನು ಮುನ್ನಡೆಸುವರು.

ಈ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನ ಗೆಲ್ಲುವವರು ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲಿದ್ದಾರೆ. ಆದ್ದರಿಂದ ತುರುಸಿನ ಸ್ಪರ್ಧೆ ಕಂಡುಬರುವ ಸಾಧ್ಯತೆ ಇದೆ. ಭಾರತ ತಂಡದಲ್ಲಿ ನಾಲ್ವರು ಮಹಿಳೆಯರು ಮತ್ತು ಮೂವರು ಪುರುಷ ವೇಟ್‌ ಲಿಫ್ಟರ್‌ಗಳಿದ್ದಾರೆ. ತಂಡ ಈಗಾಗಲೇ ಥಾಯ್ಲೆಂಡ್‌ನಲ್ಲಿ ಅಭ್ಯಾಸ ನಡೆಸುತ್ತಿದೆ.

ಈ ಹಿಂದೆ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನ ಗೆದ್ದಿರುವ ಮೀರಾಬಾಯಿ 49 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲಿದ್ದು ಕಾಮನ್ವೆಲ್ತ್ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಗಳಿಸಿರುವ ಜಿಲಿ ದಾಲಾಬೆಹರಾ 45 ಕೆಜಿ ವಿಭಾಗದಲ್ಲಿ ಕಣಕ್ಕೆ ಇಳಿಯಲಿದ್ದಾರೆ. ಸ್ನೇಹಾ ಸೊರೇನ್ (55 ಕೆಜಿ) ಮತ್ತು ರಾಖಿ ಹಲ್ದರ್ (64 ಕೆಜಿ) ಕೂಡ ಮಹಿಳೆಯರ ತಂಡದಲ್ಲಿದ್ದಾರೆ.

ADVERTISEMENT

ಯೂಥ್ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದಿರುವ ಜೆರೆಮಿ ಲಾಲ್‌ರಿನ್ನುಂಗ (67 ಕೆಜಿ)ಪುರುಷರ ವಿಭಾಗದ ಪ್ರಮುಖ ಆಕರ್ಷಣೆಯಾಗಿದ್ದಾರೆ. ಅವರಿಗೆ ಇದು ಚೊಚ್ಚಲ ವಿಶ್ವ ಚಾಂಪಿಯನ್‌ಷಿಪ್‌. ಕಾಮನ್ವೆಲ್ತ್ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನ ಗಳಿಸಿರುವ ಅಜಯ್ ಸಿಂಗ್ (81 ಕೆಜಿ) ಹಾಗೂ ರಾಷ್ಟ್ರೀಯ ಚಾಂಪಿಯನ್‌ ಅಚಿಂತಾ ಶೂಲಿ ಕೂಡ ತಂಡದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.