ADVERTISEMENT

China Masters: ಪಿ.ವಿ. ಸಿಂಧು ಕ್ವಾರ್ಟರ್ ಫೈನಲ್‌ಗೆ ಲಗ್ಗೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಸೆಪ್ಟೆಂಬರ್ 2025, 5:02 IST
Last Updated 18 ಸೆಪ್ಟೆಂಬರ್ 2025, 5:02 IST
<div class="paragraphs"><p>ಪಿ.ವಿ. ಸಿಂಧು</p></div>

ಪಿ.ವಿ. ಸಿಂಧು

   

– ರಾಯಿಟರ್ಸ್ ಚಿತ್ರ

ಶೆಂಜೆನ್‌ (ಚೀನಾ): ಚೀನಾ ಮಾಸ್ಟರ್ಸ್‌ ಸೂಪರ್ 750 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಅಗ್ರ ಆಟಗಾರ್ತಿ ಪಿ.ವಿ. ಸಿಂಧು ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದ್ದಾರೆ.

ADVERTISEMENT

ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಸಿಂಧು ಅವರು, ವಿಶ್ವ ನಂ.6 ರ‍್ಯಾಂಕ್‍ನ ಥಾಯ್ಲೆಂಡ್‌ನ ಪೋರ್ನ್‌ಪಾಯಿ ಚೊಚುವಾಂಗ್ ವಿರುದ್ಧ 21-15, 21-15ರ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಮೊದಲ ಸುತ್ತಿನಲ್ಲಿ ಸಿಂಧು ಅವರು ಡೆನ್ಮಾರ್ಕ್‌ನ ಜೂಲಿ ದವಲ್ ಚಾಕೋಬ್ಸನ್ ವಿರುದ್ಧ ಗೆಲುವು ಸಾಧಿಸಿದ್ದರು.

ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಭಾರತದ ತಾರೆ ಲಕ್ಷ್ಯ ಸೇನ್ ಹಾಗೂ ಆಯುಷ್ ಶೆಟ್ಟಿ ಮೊದಲ ಸುತ್ತಿನಿಂದಲೇ ಹೊರಬಿದ್ದಿದ್ದರು.

ಮತ್ತೊಂದೆಡೆ ಪುರುಷರ ಡಬಲ್ಸ್ ವಿಭಾಗದಲ್ಲಿ ಸಾತ್ವಿಕ್‌ ಸಾಯಿರಾಜ್ ರಣಕಿರೆಡ್ಡಿ–ಚಿರಾಗ್ ಶೆಟ್ಟಿ ಜೋಡಿ ಪ್ರಿ-ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದ್ದಾರೆ. ಕಳೆದ ವಾರವಷ್ಟೇ ಸಾತ್ವಿಕ್-ಚಿರಾಗ್ ಹಾಂಗ್‌ಕಾಂಗ್‌ ಓಪನ್‌ನಲ್ಲಿ ರನ್ನರ್‌ ಅಪ್‌ ಆಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.