ಕಾಮನ್‌ವೆಲ್ತ್ ಗೇಮ್ಸ್
(ರಾಯಿಟರ್ಸ್ ಚಿತ್ರ)
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು (ಬುಧವಾರ) ನಡೆದ ಕೇಂದ್ರ ಸಚಿವ ಸಂಪುಟವು, 2030ರ ಕಾಮನ್‌ವೆಲ್ತ್ ಕ್ರೀಡಾಕೂಟದ ಭಾರತದ ಆತಿಥ್ಯದ ಬಿಡ್‌ಗೆ ಅನುಮೋದನೆ ನೀಡಿದೆ.
ಅಲ್ಲದೆ ಈ ಪ್ರತಿಷ್ಠಿತ ಕ್ರೀಡಾಕೂಟ ಆಯೋಜಿಸಲು ಗುಜರಾತ್‌ನ ಅಹಮದಾಬಾದ್ ನಗರವನ್ನು ಯೋಗ್ಯ ನಗರವೆಂದು ಗುರುತಿಸಿದೆ.
ಅಹಮದಾಬಾದ್‌ನಲ್ಲಿ ವಿಶ್ವದರ್ಜೆಯ ಕ್ರೀಡಾಂಗಣಗಳು, ಅತ್ಯಾಧುನಿಕ ತರಬೇತಿ ಸೌಲಭ್ಯಗಳು ಮತ್ತು ಉತ್ಸಾಹಿ ಕ್ರೀಡಾ ಸಂಸ್ಕೃತಿಯ ಕುರಿತಾಗಿ ಉಲ್ಲೇಖ ಮಾಡಲಾಗಿದೆ.
ಮಾರ್ಚ್ ತಿಂಗಳಲ್ಲಿ ಕಾಮನ್‌ವೆಲ್ತ್ ಕ್ರೀಡಾಕೂಟದ ಆತಿಥ್ಯ ವಹಿಸಲು ಭಾರತದ ಬಿಡ್ ಅನ್ನು ಭಾರತ ಒಲಿಂಪಿಕ್ ಸಂಸ್ಥೆ (ಐಒಎ) ಅನುಮೋದಿಸಿತ್ತು.
ಬಿಡ್ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನಾಂಕವಾಗಿದೆ. ಮುಂದಿನ 48 ಗಂಟೆಗಳಲ್ಲಿ ಐಒಎ ಔಪಚಾರಿಕತೆ ಪೂರ್ಣಗೊಳಿಸುವ ನಿರೀಕ್ಷೆಯಿದೆ.
ಭಾರತ ಕೊನೆಯ ಬಾರಿ 2010ರಲ್ಲಿ ಕಾಮನ್‌ವೆಲ್ತ್ ಕ್ರೀಡಾಕೂಟ ಆಯೋಜಿಸಿತ್ತು. ಅಂದು ದೆಹಲಿ ಆತಿಥ್ಯ ನಗರವಾಗಿತ್ತು.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು (ಬುಧವಾರ) ನಡೆದ ಕೇಂದ್ರ ಸಚಿವ ಸಂಪುಟವು, 2030ರ ಕಾಮನ್‌ವೆಲ್ತ್ ಕ್ರೀಡಾಕೂಟದ ಭಾರತದ ಆತಿಥ್ಯದ ಬಿಡ್‌ಗೆ ಅನುಮೋದನೆ ನೀಡಿದೆ.
ಅಲ್ಲದೆ ಈ ಪ್ರತಿಷ್ಠಿತ ಕ್ರೀಡಾಕೂಟ ಆಯೋಜಿಸಲು ಗುಜರಾತ್‌ನ ಅಹಮದಾಬಾದ್ ನಗರವನ್ನು ಯೋಗ್ಯ ನಗರವೆಂದು ಗುರುತಿಸಿದೆ.
ಅಹಮದಾಬಾದ್‌ನಲ್ಲಿ ವಿಶ್ವದರ್ಜೆಯ ಕ್ರೀಡಾಂಗಣಗಳು, ಅತ್ಯಾಧುನಿಕ ತರಬೇತಿ ಸೌಲಭ್ಯಗಳು ಮತ್ತು ಉತ್ಸಾಹಿ ಕ್ರೀಡಾ ಸಂಸ್ಕೃತಿಯ ಕುರಿತಾಗಿ ಉಲ್ಲೇಖ ಮಾಡಲಾಗಿದೆ.
ಮಾರ್ಚ್ ತಿಂಗಳಲ್ಲಿ ಕಾಮನ್‌ವೆಲ್ತ್ ಕ್ರೀಡಾಕೂಟದ ಆತಿಥ್ಯ ವಹಿಸಲು ಭಾರತದ ಬಿಡ್ ಅನ್ನು ಭಾರತ ಒಲಿಂಪಿಕ್ ಸಂಸ್ಥೆ (ಐಒಎ) ಅನುಮೋದಿಸಿತ್ತು.
ಬಿಡ್ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನಾಂಕವಾಗಿದೆ. ಮುಂದಿನ 48 ಗಂಟೆಗಳಲ್ಲಿ ಐಒಎ ಔಪಚಾರಿಕತೆ ಪೂರ್ಣಗೊಳಿಸುವ ನಿರೀಕ್ಷೆಯಿದೆ.
ಭಾರತ ಕೊನೆಯ ಬಾರಿ 2010ರಲ್ಲಿ ಕಾಮನ್‌ವೆಲ್ತ್ ಕ್ರೀಡಾಕೂಟ ಆಯೋಜಿಸಿತ್ತು. ಅಂದು ದೆಹಲಿ ಆತಿಥ್ಯ ನಗರವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.