ADVERTISEMENT

ಕ್ರೀಡಾಪಟುಗಳಿಗೆ ವೈಜ್ಞಾನಿಕ ತರಬೇತಿ ಅಗತ್ಯ: ಮುಖ್ಯಮಂತ್ರಿ ಬೊಮ್ಮಾಯಿ

ಕಾಮನ್‌ವೆಲ್ತ್ ಗೇಮ್ಸ್ ಬೇಟನ್ ರಿಲೆ ಸ್ವಾಗತ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 14 ಜನವರಿ 2022, 11:39 IST
Last Updated 14 ಜನವರಿ 2022, 11:39 IST
ಬೇಟನ್‌ ರಿಲೆಯನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್‌ ಅವರು ಧ್ಯಾನ್‌ಚಂದ್ ಖೇಲ್‌ರತ್ನ ಪ್ರಶಸ್ತಿ ಪುರಸ್ಕೃತ ಅಥ್ಲೀಟ್‌ಗಳಾದ ಅಂಜು ಬಾಬಿ ಜಾರ್ಜ್‌, ಉದಯ ಕೆ. ಪ್ರಭು, ಒಲಿಂಪಿಯನ್ ಹಾಕಿ ಆಟಗಾರ ಎ.ಬಿ.ಸುಬ್ಬಯ್ಯ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್‌ ಸಭ್ಯಾಪತಿ ಬಸವರಾಜ ಎಸ್‌. ಹೊರಟ್ಟಿ, ಕರ್ನಾಟಕ ಒಲಿಂಪಿಕ್‌ ಸಂಸ್ಥೆಯ (ಕೆಒಎ) ಅಧ್ಯಕ್ಷ ಕೆ. ಗೋವಿಂದರಾಜು ಇದ್ದರು– ಪ್ರಜಾವಾಣಿ ಚಿತ್ರ
ಬೇಟನ್‌ ರಿಲೆಯನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್‌ ಅವರು ಧ್ಯಾನ್‌ಚಂದ್ ಖೇಲ್‌ರತ್ನ ಪ್ರಶಸ್ತಿ ಪುರಸ್ಕೃತ ಅಥ್ಲೀಟ್‌ಗಳಾದ ಅಂಜು ಬಾಬಿ ಜಾರ್ಜ್‌, ಉದಯ ಕೆ. ಪ್ರಭು, ಒಲಿಂಪಿಯನ್ ಹಾಕಿ ಆಟಗಾರ ಎ.ಬಿ.ಸುಬ್ಬಯ್ಯ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್‌ ಸಭ್ಯಾಪತಿ ಬಸವರಾಜ ಎಸ್‌. ಹೊರಟ್ಟಿ, ಕರ್ನಾಟಕ ಒಲಿಂಪಿಕ್‌ ಸಂಸ್ಥೆಯ (ಕೆಒಎ) ಅಧ್ಯಕ್ಷ ಕೆ. ಗೋವಿಂದರಾಜು ಇದ್ದರು– ಪ್ರಜಾವಾಣಿ ಚಿತ್ರ   

ಬೆಂಗಳೂರು: ಕ್ರೀಡಾಪಟುಗಳಿಗೆ ವೈಜ್ಞಾನಿಕವಾಗಿ ಮಾರ್ಗದರ್ಶನ ನೀಡುವ ಕೆಲಸವನ್ನು ತರಬೇತಿದಾರರು ಮಾಡಬೇಕಾದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬರ್ಮಿಂಗ್‌ಹ್ಯಾಮ್‌ ಕಾಮನ್‌ವೆಲ್ತ್‌ ಕ್ರೀಡಾಕೂಟದ ಕ್ವೀನ್ಸ್ ಬೇಟನ್‌ ರಿಲೆ ಸ್ವಾಗತ ಕಾರ್ಯಕ್ರಮದಲ್ಲಿ ಶುಕ್ರವಾರ ವರ್ಚುವಲ್ ಆಗಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.

‘ಪರಿಣತ ಕೋಚ್‌ಗಳು ಪಠ್ಯಕ್ರಮ ರೂಪಿಸಿ ಕ್ರೀಡಾಪಟುಗಳಿಗೆ ಸೂಕ್ತ ಮಾರ್ಗದರ್ಶನ ನೀಡುವ ಅವಶ್ಯಕತೆ ಇದೆ. ಅಮೃತ ಕ್ರೀಡಾ ಯೋಜನೆಯ ಗುರಿ ಈಡೇರಿಸಲು ಸರ್ಕಾರ ಅಗತ್ಯ ನೆರವು ನೀಡಲು ಬದ್ಧವಾಗಿದೆ‘ ಎಂದು ಎಂದು ಬೊಮ್ಮಾಯಿ ತಿಳಿಸಿದರು.

ADVERTISEMENT

‘ಕ್ರೀಡಾಕೂಟದ ಬೇಟನ್‌ಅನ್ನು ಭಾರತದ ನಾಲ್ಕು ಮಹಾನಗರಗಳಿಗೆ ಸ್ವೀಕಾರ ಮಾಡುವ ಅವಕಾಶ ದೊರೆತಿದ್ದು, ಈ ಪೈಕಿ ಬೆಂಗಳೂರು ಕೂಡ ಒಂದು ಎನ್ನುವುದು ಸಂತೋಷದ ಸಂಗತಿ‘ ಎಂದು ಮುಖ್ಯಮಂತ್ರಿ ನುಡಿದರು.

ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆಯ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿರುವುದು ಶ್ಲಾಘನೀಯ ಎಂದರು.

ಬೇಟನ್‌ ರಿಲೆಯನ್ನು ವಿಧಾನಸೌಧದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್‌ ಅವರು ಸ್ವಾಗತಿಸಿದರು. ವಿಧಾನಪರಿಷತ್‌ ಸಭಾಪತಿ ಬಸವರಾಜ ಎಸ್‌. ಹೊರಟ್ಟಿ, ಕರ್ನಾಟಕ ಒಲಿಂಪಿಕ್‌ ಸಂಸ್ಥೆಯ (ಕೆಒಎ) ಅಧ್ಯಕ್ಷ ಕೆ. ಗೋವಿಂದರಾಜು, ಕೆಒಎ ಪ್ರಧಾನ ಕಾರ್ಯದರ್ಶಿ ಟಿ. ಅನಂತರಾಜು, ಕ್ರೀಡಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.

ರಿಲೇಯ ರ‍್ಯಾಲಿಯುವಿಧಾನಸೌಧದಿಂದ ಕಂಠೀರವ ಕ್ರೀಡಾಂಗಣದವರೆಗೆ ಸಂಚರಿಸಿತು. ಈ ಸಂದರ್ಭದಲ್ಲಿ ಮೇಜರ್‌ ಧ್ಯಾನ್‌ಚಂದ್ ಖೇಲ್‌ರತ್ನ ಪ್ರಶಸ್ತಿ ಪುರಸ್ಕೃತ ಅಥ್ಲೀಟ್‌ಗಳಾದ ಅಂಜು ಬಾಬಿ ಜಾರ್ಜ್‌,ಉದಯ ಕೆ ಪ್ರಭು, ಒಲಿಂಪಿಯನ್ ಹಾಕಿ ಆಟಗಾರ ಎ.ಬಿ.ಸುಬ್ಬಯ್ಯ, ಈಜುಪಟು ರಿಧಿಮಾ ವೀರೇಂದ್ರಕುಮಾರ್‌ ಸೇರಿದಂತೆ ಹಲವು ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಇದ್ದರು.

ಬೇಟನ್ಸ್ ರಿಲೆಯು ಬೆಂಗಳೂರಿನಿಂದ ಶುಕ್ರವಾರವೇ ಒಡಿಶಾದ ಭುವನೇಶ್ವರಕ್ಕೆ ತೆರಳಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.