ಒಲಿಂಪಿಯನ್ ಕುಸ್ತಿಪಟು ಸುಶೀಲ್ ಕುಮಾರ್
(ಪಿಟಿಐ ಚಿತ್ರ)
ನವದೆಹಲಿ: ಕೊಲೆ ಆರೋಪದ ಮೇಲೆ ಬಂಧನದಲ್ಲಿರುವ ಒಲಿಂಪಿಯನ್ ಕುಸ್ತಿಪಟು ಸುಶೀಲ್ ಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಇಂದು(ಮಂಗಳವಾರ) ಜಾಮೀನು ಮಂಜೂರು ಮಾಡಿದೆ.
ರಾಷ್ಟ್ರೀಯ ಜೂನಿಯರ್ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ 2021ರ ಮೇ ತಿಂಗಳಿನಲ್ಲಿ ಸುಶೀಲ್ ಕುಮಾರ್ ಅವರನ್ನು ಬಂಧಿಸಲಾಗಿತ್ತು. 2023ರಲ್ಲಿ ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಅವರಿಗೆ 7 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಲಾಗಿತ್ತು.
ರಾಷ್ಟ್ರ ರಾಜಧಾನಿಯ ಕ್ರೀಡಾಂಗಣವೊಂದರಲ್ಲಿ 2021ರ ಮೇ 4ರಂದು ನಡೆದ ಗಲಾಟೆಯಲ್ಲಿ ಕುಸ್ತಿಪಟು ಸಾಗರ್ ಧನಕರ್ ಸಾವಿಗೀಡಾಗಿದ್ದರು. ಅವರ ಗೆಳೆಯರಾದ ಸೋನು ಮತ್ತು ಅಮಿತ್ ಕುಮಾರ್‌ಗೆ ಗಾಯವಾಗಿತ್ತು. ಸುಶೀಲ್ ಕುಮಾರ್ ಮತ್ತು ಇತರ ಕೆಲವರು ಇದರಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.