ADVERTISEMENT

ಸಾಗರ್‌ ರಾಣಾ ಕೊಲೆ ಪ್ರಕರಣ: ಕುಸ್ತಿಪಟು ಸುಶೀಲ್‌ ಕುಮಾರ್‌ ಮತ್ತೊಬ್ಬ ಸಹಚರನ ಬಂಧನ

ಏಜೆನ್ಸೀಸ್
Published 28 ಮೇ 2021, 4:33 IST
Last Updated 28 ಮೇ 2021, 4:33 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಕುಸ್ತಿಪಟು ಸಾಗರ್‌ ರಾಣಾ(23) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಲಿಂಪಿಕ್‌ ಪದಕ ವಿಜೇತ ಕುಸ್ತಿಪಟು ಸುಶೀಲ್‌ ಕುಮಾರ್‌ ಅವರ ಮತ್ತೊಬ್ಬ ಸಹಚರನನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಬಂಧಿತನನ್ನು ರೋಹಿತ್ ಕರೋರ್‌ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಈವರೆಗೆ ಎಂಟು ಮಂದಿ ಆರೋಪಿಗಳನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ಮುಂದುವರಿಸಿದ್ದಾರೆ.

ಛತ್ರಸಾಲ್‌ ಕ್ರೀಡಾಂಗಣದಲ್ಲಿ ಮೇ 4ರ ತಡರಾತ್ರಿ ಕುಸ್ತಿಪಟು ಸಾಗರ್‌ ರಾಣಾ ಮತ್ತು ಅವರ ಇಬ್ಬರು ಸ್ನೇಹಿತರ ಮೇಲೆ ಹಲ್ಲೆ ನಡೆದಿತ್ತು. ಘಟನೆಯಲ್ಲಿ ಸಾಗರ್‌ ಮೃತಪಟ್ಟರು. ಮಾಡೆಲ್‌ ಟೌನ್‌ ಪ್ರದೇಶದಲ್ಲಿ ಆಸ್ತಿ ವಿಚಾರಕ್ಕಾಗಿ ಸುಶೀಲ್‌ ಈ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಸುಶೀಲ್ ಮತ್ತು ಅವರ ಸ್ನೇಹಿತ ಅಜಯ್‌ ಅವರನ್ನು ಕಳೆದ ಭಾನುವಾರ ದೆಹಲಿ ಹೊರವಲಯದ ಮುಂಡ್ಕಾ ಪ್ರದೇಶದಲ್ಲಿ ದೆಹಲಿ ಪೊಲೀಸ್‌ ವಿಶೇಷ ಪಡೆ ಬಂಧಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.