ಮೈಸೂರು: ರಾಷ್ಟ್ರಮಟ್ಟದ ಕೊಕ್ಕೊ ಆಟಗಾರ ಹಾಗೂ ಮೈಸೂರು ನಗರದ ಮಾಜಿ ಮೇಯರ್ ಎನ್.ಪ್ರಕಾಶ್ (79) ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ನಿಧನರಾದರು.
ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ.
ಕೊಕ್ಕೊ ಆಟಗಾರರಾಗಿದ್ದ ಪ್ರಕಾಶ, ಏಕಲವ್ಯ ಪ್ರಶಸ್ತಿಗೆ ಭಾಜನವಾಗಿದ್ದರು. ಹಾಲಿ ಅಮೆಚೂರ್ ಕೊಕ್ಕೊ ಫೆಡರೇಷನ್ ಅಧ್ಯಕ್ಷರಾಗಿದ್ದರು. ಮೈಸೂರಿನಲ್ಲಿ ರಾಜ್ಯಮಟ್ಟದ ಕೊಕ್ಕೊ ಟೂರ್ನಿಗಳನ್ನು ಆಯೋಜಿಸಿ ಕ್ರೀಡಾಪಟುಗಳಿಗೆ ಉತ್ತೇಜನ ನೀಡುತ್ತಿದ್ದರು.
ಚಾಮುಂಡಿಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಸಂಜೆ ಅವರ ಅಂತ್ಯಕ್ರಿಯೆ ನೆರವೇರಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.