ADVERTISEMENT

ಟೋಕಿಯೊ ಒಲಿಂಪಿಕ್ಸ್‌: ಇಬ್ಬರು ಅಥ್ಲೀಟ್‌ಗಳಿಗೆ ಕೋವಿಡ್‌ ದೃಢ

ಏಜೆನ್ಸೀಸ್
Published 18 ಜುಲೈ 2021, 3:47 IST
Last Updated 18 ಜುಲೈ 2021, 3:47 IST
ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲು ತೆರಳಿರುವ ಭಾರತೀಯ ಕ್ರೀಡಾಪಟುಗಳು –ಪಿಟಿಐ ಚಿತ್ರ
ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲು ತೆರಳಿರುವ ಭಾರತೀಯ ಕ್ರೀಡಾಪಟುಗಳು –ಪಿಟಿಐ ಚಿತ್ರ    

ಟೋಕಿಯೊ: ಒಲಿಂಪಿಕ್ಸ್‌ ಆರಂಭವಾಗಲು ಕೆಲವೇ ದಿನಗಳು ಬಾಕಿ ಇರುವಾಗ ಕ್ರೀಡಾಗ್ರಾಮದಲ್ಲಿ ಇಬ್ಬರು ಅಥ್ಲೀಟ್‌ಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕ್ರೀಡಾಪಟುಗಳಿಗೆ ಸೋಂಕು ದೃಢಪಟ್ಟಿರುವುದು ಇದೇ ಮೊದಲು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕ್ರೀಡಾಕೂಟದಲ್ಲಿ ಸಾವಿರಾರು ಆಟಗಾರರು ಸ್ಪರ್ಧಿಸುತ್ತಿದ್ದು, ಇದೀಗ ಕೋವಿಡ್‌ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಇತರೆ ಆಟಗಾರರಲ್ಲಿ ಆತಂತ ಮೂಡಿಸಿದೆ.

ADVERTISEMENT

ಶನಿವಾರ ಕ್ರೀಡಾಪಟು ಅಲ್ಲದ ವ್ಯಕ್ತಿಯೊಬ್ಬರಲ್ಲಿ ಸೋಂಕು ಇರುವುದು ದೃಢಪಟ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.