
ಪಿಟಿಐ
ಗುವಾಹಟಿ: ಶುಭಮನ್ ಗಿಲ್ ಅವರು ದಕ್ಷಿಣ ಆಫ್ರಿಕಾ ಎದುರು ನಡೆಯಲಿರುವ ಏಕದಿನ ಕ್ರಿಕೆಟ್ ಸರಣಿಯಲ್ಲಿ ಆಡುವುದು ಅನುಮಾನವಾಗಿದೆ. ಅವರ ಬದಲಿಗೆ ಭಾರತ ತಂಡಕ್ಕೆ ರಿಷಭ್ ಪಂತ್ ಅಥವಾ ಕೆ.ಎಲ್. ರಾಹುಲ್ ಅವರನ್ನು ನಾಯಕರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ.
ಈಚೆಗೆ ದಕ್ಷಿಣ ಆಫ್ರಿಕಾ ಎದುರಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವಾಗ ಕುತ್ತಿಗೆಯ ಸ್ನಾಯುಸೆಳೆತಕ್ಕೊಳಗಾಗಿದ್ದರು. ಅದರಿಂದಾಗಿ ಅವರು ಮೈದಾನ ತೊರೆದು ಚಿಕಿತ್ಸೆಗಾಗಿ ತೆರಳಿದ್ದರು. ಗುವಾಹಟಿಯಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ನಲ್ಲಿಯೂ ಅವರು ಆಡಲಿಲ್ಲ.
ಅವರ ಕುತ್ತಿಗೆ ಗಾಯವು ಪೂರ್ಣ ಗುಣಮುಖವಾಗಲು ಇನ್ನೂ ಸ್ವಲ್ಪ ಸಮಯದ ಅಗತ್ಯವಿದೆ. ಆದ್ದರಂದ ಅವರು ಏಕದಿನ ಸರಣಿಗೆ ಫಿಟ್ ಆಗುವುದು ಅನುಮಾನವೆಂದು ಮೂಲಗಳು ತಿಳಿಸಿವೆ.
ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯು ಇದೇ 30ರಿಂದ ಆರಂಭವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.