ಬೆಂಗಳೂರು: ನಗರದ ಬೆಂಗಳೂರು ಗಾಲ್ಫ್ ಕ್ಲಬ್‌ನಲ್ಲಿ ಏಪ್ರಿಲ್ 3ರಿಂದ 5ರವರೆಗೆ ಪ್ರಮೋಷನಲ್ ಗಾಲ್ಫ್ ಚಾಂಪಿಯನ್‌ಷಿಪ್ ಆಯೋಜಿಸಲಾಗಿದ್ದು, ಆಟಗಾರರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.
ವಿ ಗ್ರೂಪ್ ಸಂಸ್ಥೆಯ ಆಶ್ರಯದಲ್ಲಿ ರೋಟರಿ ಬೆಂಗಳೂರು ಐಟಿ ಕಾರಿಡಾರ್‌ನ ಸಹಭಾಗಿತ್ವದಲ್ಲಿ ಟೂರ್ನಿ ಆಯೋಜಿಸಲಾಗಿದೆ. ವಿವಿಧ ರಾಜ್ಯಗಳ ಆಟಗಾರರಿಗೆ ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಧಿಕೃತ ಕ್ಲಬ್‌ಗಳಲ್ಲಿ ಸದಸ್ಯತ್ವ ಪಡೆಯದವರೂ ಇಲ್ಲಿ ಸ್ಪರ್ಧಿಸಲು ಅವಕಾಶವಿದೆ. ಟೂರ್ನಿಯಿಂದ ಸಂಗ್ರಹವಾಗುವ ಮೊತ್ತವನ್ನು ರೋಟರಿ ಸಂಸ್ಥೆಯ ಸಾಮಾಜಿಕ ಯೋಜನೆಗೆ ವಿನಿಯೋಗಿಸಲಾಗುತ್ತದೆ’ ಎಂದು ವಿ ಗ್ರೂಪ್ ನಿರ್ದೇಶಕ ವೆಂಕಟೇಶ್ ಕೆ. ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
‘ಗಾಲ್ಫ್ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಚೊಚ್ಚಲ ಟೂರ್ನಿ ಆಯೋಜಿಸಲಾಗಿದೆ. ಕೌಶಲವುಳ್ಳ ಆಟಗಾರರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬೇಕು. ವಿಜೇತರಿಗೆ ಆಕರ್ಷಕ ಬಹುಮಾನ ನೀಡಲಾಗುತ್ತದೆ. ಮುಂದಿನ ವರ್ಷಗಳಲ್ಲಿ ಮುಂಬೈ, ದೆಹಲಿ, ಹೈದರಾಬಾದ್ ಮತ್ತು ಅಹಮದಾಬಾದ್‌ಗಳಲ್ಲೂ ಟೂರ್ನಿ ನಡೆಯುವ ಯೋಜನೆಯಿದೆ’ ಎಂದರು.
ನೋಂದಣಿಗೆ ವೆಬ್‌ಬೈಟ್– www.thepgc.in, ಮೊಬೈಲ್– +916360700180 ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.