ADVERTISEMENT

ಒಲಿಂಪಿಕ್ಸ್‌ಗೆ ಕಬಡ್ಡಿ ಸೇರಿಸಲು ಪ್ರಯತ್ನ: ರಿಜಿಜು

ಪಿಟಿಐ
Published 20 ಮಾರ್ಚ್ 2020, 4:39 IST
Last Updated 20 ಮಾರ್ಚ್ 2020, 4:39 IST
ಕಿರಣ್‌ ರಿಜಿಜು
ಕಿರಣ್‌ ರಿಜಿಜು   

ನವದೆಹಲಿ: ‘ಕಬಡ್ಡಿಯನ್ನು ಒಲಿಂಪಿಕ್‌ ಕ್ರೀಡಾಕೂಟದಲ್ಲಿ ಸೇರಿಸಲು ಎಲ್ಲ ರೀತಿಯ ಪ್ರಯತ್ನಗಳನ್ನೂ ನಡೆಸಲಾಗುವುದು’ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಗುರುವಾರ ಭರವಸೆ ನೀಡಿದ್ದಾರೆ.

‘ಖೇಲೊ ಇಂಡಿಯಾ ಕ್ರೀಡಾಕೂಟದಲ್ಲಿ ಉತ್ತಮ ಸಾಮರ್ಥ್ಯ ತೋರಿದ 2,880 ಕ್ರೀಡಾಪಟುಗಳನ್ನು ಉನ್ನತ ಮಟ್ಟದ ತರಬೇತಿಗಾಗಿ ಆಯ್ಕೆ ಮಾಡಲಾಗಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದಲ್ಲಿ ಅವರು ಸಾಧನೆ ಮಾಡುವ ನಿರೀಕ್ಷೆ ಇದೆ’ ಎಂದು ಸಚಿವರು ಲೋಕಸಭೆಯಲ್ಲಿ ತಿಳಿಸಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ‘ವಿವಿಧ ಯೋಜನೆಗಳಲ್ಲಿ ಆಯ್ಕೆಯಾದ ಕ್ರೀಡಾಪಟುಗಳಿಗೆ ಆಧುನಿಕ ಸೌಲಭ್ಯ ಒಳಗೊಂಡ ತರಬೇತಿ ನೀಡಲಾಗುವುದು’ ಎಂದರು.

ADVERTISEMENT

‘ರಾಜ್ಯಗಳು ಕೂಡ ಉತ್ತಮ ಕ್ರೀಡಾಪಟುಗಳನ್ನು ಗುರುತಿಸಲು ಮತ್ತು ಬೆಳೆಸಲು ಮುಂದಾಗಬೇಕು’ ಎಂದು ರಿಜಿಜು ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.