ADVERTISEMENT

ಚೆಸ್‌: ಗುಕೇಶ್‌ಗೆ ಪ್ರಶಸ್ತಿ

ಪಿಟಿಐ
Published 23 ಫೆಬ್ರುವರಿ 2020, 19:54 IST
Last Updated 23 ಫೆಬ್ರುವರಿ 2020, 19:54 IST

ಚೆನ್ನೈ : ಭಾರತದ ಕಿರಿಯ ಗ್ರ್ಯಾಂಡ್‌ಮಾಸ್ಟರ್‌ ಡಿ.ಗುಕೇಶ್‌, ಫ್ರಾನ್ಸ್‌ನ ಕಾನ್‌ನಲ್ಲಿ ನಡೆದ ಕಾನ್‌ ಓಪನ್‌ ಚೆಸ್‌ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿದ್ದಾರೆ.

ಶನಿವಾರ ರಾತ್ರಿ ನಡೆದ ಅಂತಿಮ ಸುತ್ತಿನ ಪೈಪೋಟಿಯಲ್ಲಿ ಗುಕೇಶ್‌, ಫ್ರಾನ್ಸ್‌ನ ಹರುಟ್ಯೂನ್‌ ಬರ್ಗ್‌ಸೆಗ್ಯನ್‌ ಅವರನ್ನು ಮಣಿಸಿದರು. ಇದರೊಂದಿಗೆ ಒಟ್ಟು ಪಾಯಿಂಟ್ಸ್‌ ಅನ್ನು 7.5ಕ್ಕೆ ಹೆಚ್ಚಿಸಿಕೊಂಡು ಪ್ರಶಸ್ತಿಯ ಸಾಧನೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT